ರಾಷ್ಟ್ರೀಯ

ಮಹಾರಾಷ್ಟ್ರಕ್ಕೆ ಕೆ.ಎಎಸ್.ಆರ್.ಟಿ.ಸಿ. ಬಸ್ ಸೇವೆ

ಮಹಾರಾಷ್ಟ್ರಕ್ಕೆ ಕೆ.ಎಎಸ್.ಆರ್.ಟಿ.ಸಿ. ಬಸ್ ಸೇವೆ

ಬೆಂಗಳೂರು, ಸೆಪ್ಟೆಂಬರ್ 18:  ಕೋವಿಡ್-೧೯ ಲಾಕ್‌ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಗೋವಾ ನಂತರ ಇದೀಗ ಮಹಾರಾಷ್ಟ್ರಕ್ಕೆ  ಕೆ.ಎಸ್.ಆರ್.ಟಿ.ಸಿ. ಬಸ್ ಗಳ: ಸಂಚಾರ ಆರಂಭವಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿತ್ತು. ಈಗ ಲಾಕ್‌ಡೌನ್ ಸಡಿಲ ಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಹಾರಾಷ್ಟ್ರಕ್ಕೆ ಬೆಂಗಳೂರು, ದಾವಣಗೆರೆ, ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ.  

ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಸೋಂಕು ನಿಯಂತ್ರಣ ಕ್ರಮಗಳನ್ನು ಪರಿಪಾಲನೆ ಮಾಡಬೇಕು. ಮಾಸ್ಕ್ ಧರಿಸಿ ಪ್ರಯಾಣಿಸಬೇಕಾಗಿದೆ.  ಮುಂಗಡ ಆಸನಗಳನ್ನು www.ksrtc.in ವೆಬ್‌ಸೈಟ್‌ಮತ್ತು ನಿಗಮದ /ಫ್ರಾಂಚೈಸಿ ಕೌಂಟರ್ಗಳ ಮುಖಾಂತರ ಕಾಯ್ದಿರಿಸಿ ಕೊಳ್ಳಬಹುದಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ. 

ಸುದ್ದಿ ಓದಿ