ಕೆಎಸ್‌ಆರ್‌ಟಿಸಿಯಿಂದ ಸಿಎಂ ಕೋವಿಡ್ ಪರಿಹಾರ ನಿಧಿಗೆ 9.85 ಕೋಟಿ ರೂ ದೇಣಿಗೆ
ಬೆಂಗಳೂರು, ಮೇ 13, ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ಸಂಸ್ಥೆಗಳ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಒಂದು ದಿನದ ವೇತನದ ಮೊತ್ತ 9.85 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ‘ಕೋವಿಡ್ ಪರಿಹಾರ ನಿಧಿ’ಗೆ ದೇಣಿಗೆ ನೀಡಿದ್ದಾರೆ. ದೇಣಿಗೆ ಚೆಕ್ ಅನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಡಾ.ರಾಮ್ ನಿವಾಸ್ ಸಪೆಟ್ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 