ಕೆ.ಎಸ್.ಆರ್.ಟಿ.ಸಿ ನೇಮಕಾತಿ: ವಂಚಕರಿಂದ ದೂರವಿರಿ: ಶಿವಯೋಗಿ ಕಳಸದ್
ಬೆಂಗಳೂರು, ಜೂ 30 :ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ತಾಂತ್ರಿಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಯೋಜನೆಗೆ ಆದೇಶ ಹೊರಡಿಸಿರುವುದಾಗಿ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್‌ನಲ್ಲಿ ಊಹಾಪೋಹಗಳು ಹರಿದಾಡುತ್ತಿದ್ದು, ಜನತೆ ಈ ಕುರಿತು ಎಚ್ಚರಿಕೆಯಿಂದಿರಬೇಕು ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶವ್ಯಾಪಿ ಕೋವಿಡ್-19 ಸೋಂಕು ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗಳ ನೇಮಕಾತಿ ಪೂರ್ಣಗೊಂಡಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನಿಗಮದ ವಿವಿಧ ವಿಭಾಗಗಳಲ್ಲಿ ತರಬೇತಿಗಾಗಿ ಈಗಾಗಲೇ ನಿಯೋಜನೆ ಮಾಡಲಾಗಿದೆ ಎಂದಿದ್ದಾರೆ.
ಪ್ರಸ್ತುತ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಯಾವುದೇ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿಲ್ಲ. ಇಂತಹ ನಕಲಿ ಆದೇಶಗಳ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು. ನಿಗಮದಲ್ಲಿ ಯಾವುದೇ ಹುದ್ದೆ ಕೊಡಿಸುವುದಾಗಿ ಯಾರಾದರೂ ಆಮಿಷವೊಡ್ಡಿದಲ್ಲಿ ಈ ಬಗ್ಗೆ ಮೊಬೈಲ್ ದೂರವಾಣಿ ೭೭೬೦೯೯೦೦೫೧ ಮತ್ತು ೭೭೬೦೯೯೦೦೯೫ ಸಂಖ್ಯೆಗಳಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೇಮಕಾತಿಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನಿಗಮದ ವೆಬ್‌ಸೈಟ್ www.ksrtcjobs.com ನಲ್ಲಿ ಪ್ರಕಟಿಸಲಾಗಿದೆ ಎಂದು ಶಿವಯೋಗಿ ಕಳಸದ್ ತಿಳಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 