ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಕರವೇ ಆಗ್ರಹ

ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಕರವೇ ಆಗ್ರಹ  KaRaVe demands that the taluk be declared drought-hit

ಯಲಬುರ್ಗಾ, ಆ.29: ಪ್ರಸಕ್ತ ಸಾಲಿನಲ್ಲಿ ಸಮರ​‍್ಕ ಮಳೆಯಾಗದೆ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸರ್ಕಾರದ ಬರ ಪರಿಹಾರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರಾಜಶೇಖರ ಶ್ಯಾಗೋಟಿ ಆಗ್ರಹಿಸಿದರು.  

ಪಟ್ಟಣದ ಚೆನ್ನಮ್ಮ ವೃತ್ತದ ಎದುರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಹಶೀಲ್ದಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಪರೀಶೀಲಿಸಿ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಿದೆ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಕೇವಲ ಮೂರು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಯಲಬುರ್ಗಾ ತಾಲೂಕನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಇಲ್ಲಿನ ರೈತರಲ್ಲಿ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ ಎಂದರು.