ಕಾವೇರಿ ನೀರು ಬಿಡುಗಡೆ ಖಂಡಿಸಿ ಕರವೇ ಪ್ರತಿಭಟನೆ
KaRaVe protests against the release of Cauvery water
ಕಾರವಾರ 30: ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ ಅಭಾವ ಎದುರಾಗುವ ಆತಂಕವಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನೀರು ಬಿಡುಗಡೆ ಮಾಡಲು ಸೂಚಿಸಿರುವುದು ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಕೆಆರ್‌ಎಸ್, ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳಲ್ಲಿರುವ ನೀರು ರಾಜ್ಯದ ಅವಶ್ಯಕತೆ ಪೂರೈಸಲು ಮಾತ್ರ ಸಾಕಾಗುವಷ್ಟು ಇದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದರಿಂದ ರೈತರು ಹಾಗೂ ಸಾರ್ವಜನಿಕರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಕೂಡಲೇ ಕಾವೇರಿ ನೀರು ನಿರ್ವಹಣಾ ಸಮಿತಿಯ ಶಿಫಾರಸನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರಾಜ್ಯದ ವಾಸ್ತವ ಸ್ಥಿತಿಯನ್ನು ಸಮರ್ಥವಾಗಿ ಮಂಡಿಸಿ ಮರುಪರೀಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಅಧ್ಯಕ್ಷ ಅಕ್ಷಯ ನಾಗೇಕರ, ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಕಲ್ಗುಟ್ಕರ್, ಸಂಘಟನಾ ಕಾರ್ಯದರ್ಶಿ ಬ್ರಿಜೇಶ್ ನಾಯ್ಕ್, ಕೃಷ್ಣ ಬಂಟ್, ಮಾರುತಿ ನಾಯ್ಕ್, ಮಂಗೇಶ್ ಕಡವಾಡಕರ, ಅಶೋಕ್ ರಾಣೆ, ತಾಲೂಕು ಅಧ್ಯಕ್ಷ ಮಹೇಶ್ ಬಾಂದೇಕರ್, ಕಾರ್ತಿಕ್ ಅರಮನೆ, ಉದಯ ನಾಯ್ಕ್, ನಾಗರಾಜ್ ಶೆಟ್ಟಿ ಸೇರಿದಂತೆ ಹಲವಾರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 