ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಕಸಾಪದ ಕಾರ್ಯಕ್ರಮಗಳು ಅಗತ್ಯ
KaSaPa's programs are essential to foster an interest in literature among children
ಲೋಕದರ್ಶನ ವರದಿ
ಕಂಪ್ಲಿ, ಸೆ. 06: ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಹಾಗೂ ಸಾಂಸ್ಕೃತಿಕ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ ಎಂದು ಮುಖ್ಯ ಶಿಕ್ಷಕ ಎಂ. ರೇವಣ್ಣ ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶುಕ್ರವಾರ ಸತ್ಯನಾರಾಯಣಪೇಟೆ ಸಹಿಪ್ರಾ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ದತ್ತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸತ್ಯನಾರಾಯಣಪೇಟೆ ಸಹಿಪ್ರಾ ಶಾಲೆಯ ಶಿಕ್ಷಕ ಶಶಿಧರ ಅಕ್ಕಸಾಲಿ ಅವರು ‘ಸಾಂಪ್ರದಾಯಿಕ ಕಲೆ’ ಹಾಗೂ ‘ಮಾನವನು ನಡೆದು ಬಂದ ಹಾದಿ’ ವಿಷಯಗಳ ಕುರಿತು ಉಪನ್ಯಾಸ ನೀಡಿದರು.
ಮಾನವನು ವಿವಿಧ ಕಾಲಘಟ್ಟಗಳಲ್ಲಿ ನಾಗರಿಕನಾಗಿ ಬೆಳೆದಿದ್ದು, ನಾಗರಿಕತೆ ನಿರಂತರವಾಗಿ ವಿಕಸನಗೊಳ್ಳುತ್ತಿದೆ. ಮಕ್ಕಳಿಗೆ ವಿದ್ಯಾರ್ಥಿ ಹಂತದಲ್ಲಿಯೇ ಸಾಂಪ್ರದಾಯಿಕ ಕಲೆಗಳ ಬಗ್ಗೆ ಆಸಕ್ತಿ ಹಾಗೂ ಅಭ್ಯಾಸ ಬೆಳೆಸಬೇಕು. ಮಾನವನು ಮಾತನಾಡುವ ಮುನ್ನವೇ ಸಂಜ್ಞೆ ಹಾಗೂ ಚಿತ್ರಕಲೆಯ ಮೂಲಕ ತನ್ನ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದನು ಎಂದು ಅವರು ವಿವರಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಣ್ಮುಖಪ್ಪ ಚಿತ್ರಗಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಮಕ್ಕಳು ಅಂಕಗಳಿಗಾಗಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಅಗತ್ಯವಿದೆ ಎಂದರು.
ಮುಖ್ಯ ಶಿಕ್ಷಕ ಎಂ. ರೇವಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಕಸಾಪದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 