ಕಬಡ್ಡಿ : ವಿಭಾಗ ಮಟ್ಟಕ್ಕೆ ಆಯ್ಕೆ
ಯರಗಟ್ಟಿ 16: ಸಮೀಪದ ಮುನವಳ್ಳಿ ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಶಾಲೆಯ ವಿದ್ಯಾರ್ಥಿಗಳು ಬೆಳಗಾವಿ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನೇಸರಗಿಯಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ಶಿಕ್ಷಣ ಸಂಯೋಜಕ ಗುರುನಾಥ ಕರಾಳೆ, ಸಿಆರ್‌ಪಿ ಮೀರಾ ಮುರನಾಳ, ಪ್ರಧಾನ ಗುರು ಬಿ.ಎಚ್.ಖೊಂದುನಾಯ್ಕ ಹಾಗೂ ಶಿಕ್ಷಕರು ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.