ಕಾಬೂಲ್ ಭಯೋತ್ಪಾದನಾ ದಾಳಿ ಪ್ರಕರಣ : ಮೃತರ ಸಂಖ್ಯೆ 103 ಕ್ಕೆ ಏರಿಕೆ
ಕಾಬೂಲ್, ಆಗಸ್ಟ್ 27: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತರಾದವರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.
ಈ ಕುರಿತು ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟಗಳು ಕನಿಷ್ಠ 90 ಅಫಘಾನ್ ನಾಗರಿಕರನ್ನು ಬಲಿ ತೆಗೆದುಕೊಂಡಿವೆ ಎಂದು ದಿ ವಾಲ್ ಸ್ಟ್ರೀಟ್ ಜರ್ನಲ್ ತಿಳಿಸಿದೆ.
ಪೆಂಟಗನ್ ಈ ಹಿಂದೆ 13 ಸೈನಿಕರ ಸಾವನ್ನು ದೃಢಪಡಿಸಿದೆ. ಕಾಬೂಲ್ ವಿಮಾನ ನಿಲ್ದಾಣ ಮತ್ತು ಅದರ ಹೊರವಲಯವನ್ನು ಗುರಿಯಾಗಿಸಿಕೊಂಡು ಗುರುವಾರ, ಕನಿಷ್ಠ ನಾಲ್ಕು ಸ್ಫೋಟಗಳು ನಡೆದವು. ಇಸ್ಲಾಮಿಕ್ ಸ್ಟೇಟ್-ಖೋರಾಸನ್ ಭಯೋತ್ಪಾದಕ ಗುಂಪು ಈ ದಾಳಿಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ.