ಕಾಗವಾಡ ತಾಲೂಕು ಬರಪೀಡಿತ ಪಟ್ಟಿಗೆಗೆ ಸೇರೆ್ಡ
ಲೋಕದರ್ಶನ ವರದಿ
ಕಾಗವಾಡ ಸೆ.25: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕಾಗವಾಡ ತಾಲೂಕನ್ನು ಕೈಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬರಪೀಡಿತ ಪ್ರದೇಶಗಳ ಪಟ್ಟಿಗೆ ಕಾಗವಾಡ ತಾಲೂಕನ್ನು ಸೇರೆ್ಡಗೊಳಿಸುವಂತೆ ಶಾಸಕ ರಾಜು ಕಾಗೆ ಅವರು ಸೆ.18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಕಾಗವಾಡ ತಾಲೂಕಿನಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವುದನ್ನು ಸರ್ಕಾರದ ಗಮನಕ್ಕೆ ತಂದಿದ್ದ ಶಾಸಕ ರಾಜು ಕಾಗೆ, ಆರೋಗ್ಯ ಸಮಸ್ಯೆಗಳ ನಡುವೆಯೂ ಬರ ಪರಿಸ್ಥಿತಿಯ ಕುರಿತು ಸರ್ಕಾರದ ಗಮನ ಸೆಳೆದು, ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಬರ ಪರಿಸ್ಥಿತಿಯ ಅವಲೋಕನ ನಡೆಸುವಂತೆ ಮನವಿ ಮಾಡಿದ್ದರು.
ಶಾಸಕರ ಮನವಿಗೆ ಸ್ಪಂದಿಸಿರುವ ಸರ್ಕಾರ, ಕಾಗವಾಡ ತಾಲೂಕನ್ನು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರೆ್ಡಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಕಾಗವಾಡ ತಾಲೂಕಿನ ರೈತರಿಗೆ ಬರ ಪರಿಹಾರ ಸೌಲಭ್ಯಗಳು ದೊರೆಯುವ ನೀರೀಕ್ಷೆ ಮೂಡಿದೆ.