ಕಲ್ಲಪ್ಪಗೌಡ ಗೊಲ್ಲಾಳಪ್ಪಗೌಡ ಪಾಟೀಲ ನಿಧನ
ಸಿಂದಗಿ 11: ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿ ನಿರ್ದೇಶಕ ಕಲ್ಲಪ್ಪಗೌಡ ಗೊಲ್ಲಾಳಪ್ಪಗೌಡ ಪಾಟೀಲ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ತಾಶಿಪ್ರ ಮಂಡಳಿಯ ವಿವಿಧ ಅಂಗ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯರು, ಸಿಬ್ಬಂದಿವರ್ಗ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಎಚ್.ಜಿ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ, ಸಿ.ಎಂ.ಮನಗೂಳಿ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಎ.ಬಿ.ಸಿಂದಗಿ, ಬಿ.ಜಿ.ಮಠ, ಎಸ್.ಎ.ಪಾಟೀಲ, ಸತೀಶಕುಮಾರ ಪಾಟೀಲ, ಅಜ್ಜಪ್ಪ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಇದ್ದರು.