ವಿಮೋಚನೆಯ ಐತಿಹಾಸಿಕ ದಿನವೇ ಕಲ್ಯಾಣ ಕರ್ನಾಟಕ ಉತ್ಸವ: ಖಾಜಿ
Kalyana Karnataka Utsava Marks the Historic Day of Liberation: Khaji
ಕೊಪ್ಪಳ, ಸೆ.17: ಕಲ್ಯಾಣ ಕರ್ನಾಟಕದ ಜನರಿಗೆ ಸೆ.17 ಅತ್ಯಂತ ಮಹತ್ವದ ದಿನ. ಹೈದರಾಬಾದ್ ಕರ್ನಾಟಕ ವಿಮೋಚನೆಯ ಐತಿಹಾಸಿಕ ದಿನವನ್ನು ಕಲ್ಯಾಣ ಕರ್ನಾಟಕ ಉತ್ಸವವಾಗಿ ಆಚರಿಸುವುದು ಹೆಮ್ಮೆಯ ಸಂಗತಿ ಎಂದು ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಸೈಯದ್ ಗೌಸ್ ಪಾಷಾ ಖಾಜಿ ಹೇಳಿದರು.
ನಗರದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಮಿಲ್ಲತ್ ಪಬ್ಲಿಕ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಹೈದರಾಬಾದ್ ಸಂಸ್ಥಾನದ ಆಡಳಿತದಲ್ಲಿದ್ದ ಇಂದಿನ ಕಲ್ಯಾಣ ಕರ್ನಾಟಕದ ಪ್ರದೇಶಗಳು ಹೋರಾಟ, ತ್ಯಾಗ ಮತ್ತು ಬಲಿದಾನದ ಬಳಿಕ 1948ರ ಸೆಪ್ಟೆಂಬರ್ 17ರಂದು ಭಾರತೀಯ ಒಕ್ಕೂಟಕ್ಕೆ ಸೇರೆ್ಡಯಾದವು. ಈ ಐತಿಹಾಸಿಕ ದಿನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದರು.
ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸಂವಿಧಾನದ 371(ಜೆ) ಕಲಂ ಜಾರಿಗೊಳಿಸಿದೆ. ಇದರ ಸಮರ್ಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು. ಶಿಕ್ಷಣ, ಉದ್ಯೋಗ ಸೇರಿದಂತೆ ಈ ಭಾಗದ ಅಗತ್ಯ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ಹಾಗೂ ಮುತುವರ್ಜಿ ವಹಿಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಸಲಹೆಗಾರ ಹಾಗೂ ಪತ್ರಕರ್ತ ಎಂ. ಸಾಧಿಕ್ ಅಲಿ, ಶಾಲೆಯ ಮುಖ್ಯಶಿಕ್ಷಕ ಮೊಹಮ್ಮದ್ ಅಜೀಜ್ ರೇವಡಿ, ಸಹ ಶಿಕ್ಷಕರಾದ ನಾಜಿಯಾ, ಸಾನಿಯಾ, ನಾಗ್ಮಾ, ಬಿಬಿ ಶಾಹಿದಾ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 