ವಿಜಯಪುರ

ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕನಕಲ್ ಅಗ್ರಹ

ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕನಕಲ್ ಅಗ್ರಹ

ದೇವರ ಹಿಪ್ಪರಗಿ 07 : ಸಮುದಾಯದ ಮುಖಂಡ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕ ಉಪಾಧ್ಯಕ್ಷರಾದ ರಹಿಮಾನಸಾಬ್ ಕನಕಾಲ್ ಹೈಕಮಾಂಡ್ ಗೆ ಆಗ್ರಹಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವ ಕಾರಣ ಈಗ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಜಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ ಅಲ್ಪಸಂಖ್ಯಾತ ಹಾಗೂ ಅಹಿಂದ ವರ್ಗದ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ನೀಡಬೇಕೆಂದು ಆಗ್ರಹಿಸಿದರು.  ಈಗಾಗಲೇ ಕರ್ನಾಟಕದಲ್ಲಿ ಎರಡು ಉಪ ಚುನಾವಣೆ ಹಾಗೂ ಹೊರರಾಜ್ಯದ ಕೇರಳದ ಎಲೆಕ್ಷನದಲ್ಲಿ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ಕಾರ್ಯನಿರ್ವಹಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣರಾಗಿದ್ದಾರೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿರುವ ಆಡಿಯೋ  ರಾಜಕೀಯ ಷಡ್ಯಂತ್ರ ನಡಿತಾ ಇದ್ದು ಇದನ್ನು ಸೂಕ್ಷ್ಮವಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಬೇಕೆಂದು ಆಗ್ರಹಿಸಲಾಯಿತು. 


ಸುದ್ದಿ ಓದಿ