ಬೆಳಗಾವಿ

ಒಳಚರಂಡಿ ವ್ಯವಸ್ಥೆಗಾಗಿ ಕಂಚವೀರ ನಗರ ನಿವಾಸಿಗಳ ಆಕ್ರೋಶ

ಒಳಚರಂಡಿ ವ್ಯವಸ್ಥೆಗಾಗಿ ಕಂಚವೀರ ನಗರ ನಿವಾಸಿಗಳ ಆಕ್ರೋಶ


ಮುತಗಾ 22 :  ಮುತಗಾ ಗ್ರಾಮದ ಕಂಚವೀರ ನಗರದಲ್ಲಿ ಕಳೆದ 30 ವರ್ಷಗಳಿಂದ ಶಾಶ್ವತ ಒಳಚರಂಡಿ ವ್ಯವಸ್ಥೆ ಇಲ್ಲದೆ ನೂರಾರು ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ ಎಂದು ನಿವಾಸಿಗಳ ಸಂಘ ಆರೋಪಿಸಿದೆ. ಮನೆಗಳಿಂದ ಹೊರಬರುವ ಕೊಳಚೆ ನೀರು ಸಾರ್ವಜನಿಕ ರಸ್ತೆಗಳಲ್ಲಿ ಹರಿದು ನಿಲ್ಲುತ್ತಿದ್ದು, ದುರ್ವಾಸನೆ ಹಾಗೂ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದೆ. ಇದರಿಂದ ಡೆಂಗ್ಯೂ, ಮಲೇರಿಯಾ, ಟೈಫಾಯಿಡ್ ಸೇರಿದಂತೆ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಕಂಚವೀರ ನಗರದಲ್ಲಿ ಸಮರ​‍್ಕ ಭೂಗತ ಒಳಚರಂಡಿ ಪೈಪ್ಲೈನ್ ನಿರ್ಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ನಿವಾಸಿಗಳು ಆಗ್ರಹಿಸಿದರು. 


ಸುದ್ದಿ ಓದಿ