ಇತಿಹಾಸಕ್ಕೆ ಸಾಕ್ಷಿಯಾದ ಕಂಗ್ರಾಳಿ ಬಿ.ಕೆ: 43 ವರ್ಷಗಳ ಬಳಿಕ ಶ್ರೀ ಮಹಾಲಕ್ಷ್ಮಿ ಜಾತ್ರೆಗೆ ಭವ್ಯ ಚಾಲನೆ
Kangrali BK, a witness to history: Sri Mahalakshmi Fair grandly inaugurated after 43 years
ಬೆಳಗಾವಿ 28: ಸುಮಾರು 43 ವರ್ಷಗಳ ದೀರ್ಘ ನೀರೀಕ್ಷೆಯ ನಂತರ ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಇಂದು ಬೆಳಗ್ಗೆ 5.58ಕ್ಕೆ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಭವ್ಯವಾಗಿ ಚಾಲನೆ ನೀಡಲಾಯಿತು.
ಗ್ರಾಮದೆಲ್ಲೆಡೆ ಭಕ್ತಿ, ಸಂಭ್ರಮ ಮತ್ತು ಹಬ್ಬದ ವಾತಾವರಣ ಕಂಗೊಳಿಸಿತು. ಜಾತ್ರೆಯ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ-ಹವನ ಹಾಗೂ ಮಂತ್ರಾಕ್ಷತೆ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಭಾಗವಹಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್, ಗ್ರಾಮಸ್ಥರು, ಹಿರಿಯರು, ಯುವಕರು ಹಾಗೂ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಜಾತ್ರೆಯ ಸಂಭ್ರಮಕ್ಕೆ ಸಾಕ್ಷಿಯಾದರು. ಸಾಂಪ್ರದಾಯಿಕ ವಾದ್ಯಗಳ ನಾದ, ಪೂಜಾ ವಿಧಿವಿಧಾನಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮವು ಹಬ್ಬದ ಮೆರಗು ಪಡೆದುಕೊಂಡಿತು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, “ದೀರ್ಘ ಕಾಲದ ಬಳಿಕ ನಡೆಯುತ್ತಿರುವ ಈ ಜಾತ್ರೆ ಗ್ರಾಮಸ್ಥರ ಏಕತೆ ಮತ್ತು ಭಕ್ತಿಯ ಸಂಕೇತವಾಗಿದೆ. ತಾಯಿ ಮಹಾಲಕ್ಷ್ಮಿಯ ಆಶೀರ್ವಾದದಿಂದ ಗ್ರಾಮಕ್ಕೆ ಶಾಂತಿ, ಸಮೃದ್ಧಿ ಬರಲಿ. ಜಾತ್ರಾ ಮಹೋತ್ಸವವು ನಿರ್ವಿಘ್ನವಾಗಿ ನೆರವೇರಲಿ,” ಎಂದು ಪ್ರಾರ್ಥಿಸಿದರು.
ಜಾತ್ರಾ ಮಹೋತ್ಸವದ ಅಂಗವಾಗಿ ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸುವ ನೀರೀಕ್ಷೆಯಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನಿರ್ದೇಶನದಂತೆ ಗ್ರಾಮದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಮಿತಿಯವರು ಸೂಕ್ತ ವ್ಯವಸ್ಥೆ ಮಾಡಿರುವುದು ಗಮನಾರ್ಹವಾಗಿದೆ.ಒಟ್ಟಾರೆ, ಕಂಗ್ರಾಳಿ ಬಿ.ಕೆ ಗ್ರಾಮವು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ, ಭಕ್ತಿ ಮತ್ತು ಸಂಪ್ರದಾಯಗಳ ಸಮ್ಮಿಲನದ ಮೂಲಕ ಹೊಸ ಚರಿತ್ರೆ ಬರೆಯುತ್ತಿರುವುದು ವಿಶೇಷವಾಗಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 