ಹುಬ್ಬಳ್ಳಿಯಲ್ಲಿ ವಿಶ್ವ ಕನ್ನಡ ಬಳಗವು ನಡೆಸಿದ ಕನ್ನಡ ರಾಜ್ಯೋತ್ಸವ ದಿನಾಚರಣೆ
ಹುಬ್ಬಳ್ಳಿಯಲ್ಲಿ ವಿಶ್ವ ಕನ್ನಡ ಬಳಗವು ನಡೆಸಿದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಶುಭ ಸಂದರ್ಭದಲ್ಲಿ ಕ್ರೀಡಾ ರಂಗದಲ್ಲಿ ಸಾಧನೆ ಮಾಡಿದ ಧಾರವಾಡದ ಜೆ.ಎಸ್.ಎಸ್. ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಗ್ಲೋರಿಯಾ ಮುರ್ತೋಟಿ ಹಾಗೂ ಸಿಂಚನಾ ಹಿರೇಮಠ ಇವರಿಗೆ ಕರ್ನಾಟಕ ರಾಜ್ಯೋತ್ಸವ ಕ್ರೀಡಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿನಿಯರ ಈ ಸಾಧನೆಗೆ ಜೆ.ಎಸ್.ಎಸ್ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಜೆ.ಎಸ್.ಎಸ್. ಐ.ಟಿ.ಐ ಕಾಲೇಜಿನ ಪ್ರಾಂಶುಪಾಲ ಮಹಾವೀರ ಉಪಾಧೆ್ಯೆ ಹಾಗೂ ಶಾಲೆಯ ಪ್ರಾಂಶುಪಾಲ ಸಾಧನಾ ಎಸ್ ಇವರು ವಿದ್ಯಾರ್ಥಿ ಹಾಗೂ ಪಾಲಕರನ್ನು ಅಭಿನಂದಿಸಿದ್ದಾರೆೆ.