ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ: ತಹಸೀಲ್ದಾರ್ ಮಠದ
ಲೋಕದರ್ಶನ ವರದಿ
ಯರಗಟ್ಟಿ 21: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ಎಮ್.ಎನ್. ಮಠದ ತಿಳಿಸಿದರು.
ತಾಲೂಕು ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಲವಾರು ಭಾಗಗಳಾಗಿ ಹಂಚಿ ಹೋಗಿದ್ದ ಕನ್ನಡ ಪ್ರದೇಶಗಳು ಏಕೀಕರಣಗೊಂಡ ಕನ್ನಡ ನಾಡಿಗೆ ಕರ್ನಾಟಕವೆಂದು ನಾಮಕರಣವಾಗಿ 50 ವರ್ಷ ಕಳೆದ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.
ಈ ಬಾರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು ಬೆಳಗ್ಗೆ ಪ್ರಭಾತ್ಪೇರಿ ನಡೆಸಿ, ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ವಿವಿಧ ಕಲಾ ತಂಡಗಳು ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ತಮ್ಮಣ್ಣಾ ಕಾಮಣ್ಣವರ ಆಗ್ರಹಿಸಿದರು.
ಕರವೇ ಅಧ್ಯಕ್ಷ ರಫೀಕ ಡಿ ಕೆ ಮಾತನಾಡಿ ನವೆಂಬರ್ ತಿಂಗಳಲ್ಲಿ ಒಂದು ದಿನವನ್ನು ನಿಗದಿಪಡಿಸಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಹೇಳಿದರು.
ಮಾಜಿ ಪ. ಪಂ. ಸದಸ್ಯ ಅಜೀತಕುಮಾರ ದೇಸಾಯಿ, ಪ. ಪಂ. ಮುಖ್ಯಾಧಿಕಾರಿ ಡಿ. ಎನ್. ತಹಶೀಲ್ದಾರ, ಸಾಹಿತ್ಯಿ ಡಾ. ರಾಜಶೇಖರ ಬಿರಾದಾರ, ಪಶು ವೈದ್ಯಾಧಿಕಾರಿ ಎಮ್. ವಿ. ಪಾಟೀಲ, ಎಎಸ್ಐ ವಾಯ್. ಎಂ. ಕಡಕೋಳ, ಶಿಕ್ಷಕರಾದ ಬಿ. ಎಸ್. ಆಲದಕಟ್ಟಿ, ಆರೋಗ್ಯ ಇಲಾಖೆಯ ಆಯ್. ಆರ್. ಗಂಜಿ, ಎಚ್. ಎಸ್. ನಾಯ್ಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು