ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ
ಮುಂಡಗೋಡ 04: ಅಕ್ಟೋಬರ್ 16ರಂದು ನಡೆಯಲಿರುವ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಕಣಾಚಾರಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷತೆಯನ್ನು ವಸಂತ ಕೊಣಸಾಲಿ ವಹಿಸಿ ಮಾತನಾಡಿದ್ದರು.
ಈ ಸಂದರ್ಭದಲ್ಲಿ ಕ.ಸಾ.ಪ. ಮಾಜಿ ಅಧ್ಯಕ್ಷರಾದ ಡಾ.ಪಿ.ಪಿ.ಛಬ್ಬಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಎಸ್.ಕೆ.ಬೋರಕರ, ಶಶಿಕಲಾ ಮಿರಜಕರ, ಜಗದೀಶ್ ಕಾನಡೆ, ಕ.ಸಾ.ಪ. ತಾಲೂಕಾ ಗೌರವ ಕಾರ್ಯದರ್ಶಿ ಎಸ್.ಡಿ.ಮೂಡಣ್ಣವರ್ . ನಾಗೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಮಲ್ಲಮ್ಮ ನೀರಲಗಿ ಪ್ರಾರ್ಥನೆ ಗೀತೆ ಹಾಡಿದರು. ಕ.ಸಾ.ಪ. ತಾಲೂಕಾ ಗೌರವ ಕಾರ್ಯದರ್ಶಿ ವಿನಾಯಕ ಶೇಟ ಕಾರ್ಯಕ್ರಮ ನಿರೂಪಿಸಿದರು.