ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ಬೆಳಗಾವಿ : ಸರ್ವೋನ್ನತ ನ್ಯಾಯಾಲಯದ ಖ್ಯಾತ ನ್ಯಾಯವಾದಿ ಮೋಹನ ಕಾತರಕಿ ಅವರು ಬೆಳಗಾವಿಗೆ ಆಗಮಿಸಿದ್ದು ನಾಳೆ ಬುಧವಾರ 17ರಂದು ಮುಂಜಾನೆ 11 ಗಂಟೆಗೆ ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಕನ್ನಡ ಸಂಘಟನೆಗಳ ಮುಖಂಡರ ಜೊತೆಗೆ ನೆಲ, ಜಲ, ಭಾಷೆ ಮತ್ತು ಬೆಳಗಾವಿಯ ಪಾಲಿಕೆಯ ಸಂಬAಧ ಸಂವಾದ ನಡೆಸಲಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಮೂಲದವರಾದ ಕಾತರಕಿ ಅವರು ಮಹಾದಾಯಿ, ಕೃಷ್ಣ ಮತ್ತು ಕಾವೇರಿ ಜಲವಿವಾದಗಳ ಪ್ರಕರಣಗಳಲ್ಲಿ ಕರ್ನಾಟಕ ಪರವಾಗಿ ಸಮರ್ಥವಾಗಿ ವಾದ ಮಂಡಿಸಿ ಜಯಗಳಿಸಿಕೊಟ್ಟಿದ್ದಾರೆ. ನಾಳೆ ನಡೆಯುವ ಸಂವಾದ ಕಾರ್ಯಕ್ರಮಕ್ಕೆ ಕನ್ನಡ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಆಗಮಿಸಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಕೋರಿದ್ದಾರೆ.