ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
Karalaga village inundated due to rain; students face hardship; schools and colleges closed.
ಬೆಳಗಾವಿ /ಖಾನಾಪುರ : ಕಳೆದ ನಾಲ್ಕು–ಐದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಖಾನಾಪುರ ತಾಲೂಕಿನ ಹಲವೆಡೆ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ. ಅದರಲ್ಲೂ ಕಾರಲಗಾ ಗ್ರಾಮದಲ್ಲಿ ಪ್ರಮುಖ ರಸ್ತೆ ಸಂಪೂರ್ಣವಾಗಿ ಮಳೆ ನೀರಿನಲ್ಲಿ ಮುಳುಗಿದ್ದು, ಶಾಲೆಗೆ ತೆರಳುವ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ನಲ್ಲಿ ಸತತವಾಗಿ ಮಳೆ ಸುರಿಯುತ್ತಿರುವದರಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ ಅವರು ರಜೆ ಘೋಷಿಸಿದ್ದಾರೆ.
ರಸ್ತೆಯ ಮೇಲೆ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಜೀವಭಯದ ನಡುವೆ ಶಾಲೆಗೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಪಾಲಕರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಳೆಗಾಲ ಆರಂಭಕ್ಕೂ ಮುನ್ನ ಅಗತ್ಯ ಮುನ್ನೆಚ್ಚರಿಕೆ ಹಾಗೂ ಚರಂಡಿ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳದಿರುವುದೇ ಸಮಸ್ಯೆಗೆ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಗ್ರಾಮದ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ, ಮನೆಯಲ್ಲಿದ್ದ ವಸ್ತುಗಳು ಹಾನಿಗೊಳಗಾಗಿವೆ. ಮನೆಗಳೊಳಗೆ ನುಗ್ಗಿದ ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸ ಪಡುವಂತಾಗಿದೆ.
ಸಮಸ್ಯೆಯ ಗಂಭೀರತೆಯನ್ನು ಮನಗಂಡು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ರಸ್ತೆ ಹಾಗೂ ಚರಂಡಿಗಳ ದುರಸ್ತಿ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಂಡು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 