ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಕರವೇ ಒತ್ತಾಯ

ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಕರವೇ ಒತ್ತಾಯ

ಬೆಳಗಾವಿ : ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ದೀಪಕ ಗುಡುನಟ್ಟಿ ಅವರ ನೇತೃತ್ವದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. 

      ಶುಕ್ರವಾರ ಬೆಳಗಾವಿಗೆ ಆಗಮಿಸಿದ್ದ ರಾಜ್ಯದ ಗೃಹಸಚಿವ ಡಾ. ಜಿ. ಪರಮೇಶ್ವರ ವರನ್ನು ಭೆಟಿ ಮಾಡಿ ಕರವೇ ಪದಾಧಿಕಾರಿಗಳು ಈ ಕುರಿತು ಮನವಿಯೊಂದನ್ನು ನೀಡಿ, ನಮ್ಮ ನಾಡಿನ ನೆಲ, ಜಲ, ಭಾಷೆ ಹಾಗೂ ಸಂಸ್ಕöÈತಿಗೆ ಧಕ್ಕೆ ಬಂದಾಗ, ಕನ್ನಡದ ಹಿತವನ್ನು ಕಾಯುವ ನಿಟ್ಟಿನಲ್ಲಿ ಹೋರಾಟ ಮಾಡಿದ ರಾಜ್ಯದ ನೂರಾರು ಕನ್ನಡಪರ ಹೋರಾಟಗಾರರ ಮೇಲೆ ಸಾವಿರಾರು ಮೊಕದ್ದಮೆಗಳು ದಾಖಲಾಗಿವೆ.

     ಈ ಮೊಕದ್ದಮೆಗಳನ್ನು ಕಾನೂನಾತ್ಮಕವಾಗಿ ಹಿಂಪಡೆದು, ನಾಡಿನ ಹಿತದೃಷ್ಟಿಯಿಂದ ರದ್ದುಗೊಳಿಸಬೇಕೆಂದು ಕೋರಿ ಅನೇಕ ಕನ್ನಡಪರ ಸಂಘಟನೆಗಳು ಹಾಗೂ ಹೋರಾಟಗಾರರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದಲೂ ತಮಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿಗಳನ್ನು ಸಲ್ಲಿಸುತ್ತಲೇ ಬಂದಿದ್ದೇವೆ. ಆದರೆ, ನಮ್ಮ ಮನವಿಗೆ ಇಲ್ಲಿಯವರೆಗೆ ಸೂಕ್ತ ಸ್ಪಂದನೆ ದೊರೆತಿಲ್ಲ ಹಾಗೂ ಅದು ಕೇವಲ ಭರವಸೆಯಾಗಿಯೇ ಉಳಿದಿದೆ.

     ಗೃಹಸಚಿವರೇ, ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯುವುದಾಗಿ ತಾವು ಹಾಗೂ ಮುಖ್ಯಮಂತ್ರಿಗಳು ಈ ಹಿಂದೆ ಭರವಸೆ ನೀಡಿದ್ದೀರಿ. ಆದರೆ, ಇದುವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ನಾಡಿನ ಹಿತ ಕಾಯುವ ನಿಟ್ಟಿನಲ್ಲಿ ಹೋರಾಟ ಮಾಡಿದ ಕನ್ನಡಿಗರು, ನ್ಯಾಯಾಲಯಗಳಿಗೆ ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಹೋರಾಟಗಾರರು ಹಲವಾರು ವರ್ಷಗಳಿಂದ ತೀವ್ರ ವೇದನೆ ಅನುಭವಿಸುತ್ತಿದ್ದಾರೆ.

     ಆದ್ದರಿಂದ, ತಾವು ಈ ವಿಚಾರದಲ್ಲಿ ತಕ್ಷಣವೇ ಸೂಕ್ತ ಕ್ರಮ ಕೈಗೊಂಡು, ಹೋರಾಟಗಾರರ ಮೇಲಿನ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯುವ ಮೂಲಕ, ಪ್ರಸ್ತುತ ಇರುವ ಸರ್ಕಾರ ’ಕನ್ನಡಿಗರ ಸರ್ಕಾರ’ ಹಾಗೂ ’ಕನ್ನಡಪರ ಸರ್ಕಾರ’ ಎಂಬುದನ್ನು ಸಾಬೀತುಪಡಿಸಬೇಕೆಂದು ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇವೆ.

   ಈ ಸಂದರ್ಭದಲ್ಲಿ ದೀಪಕ ಗುಡಗನಟ್ಟಿ, ಗಣೇಶ ರೋಕಡೆ, ಲೋಕೇಶ ರಾಠೋಡ, ಅರ್ಜುನ ಕಾಂಬಳೆ, ಗಂಗಾರಾಮ ಶೀಗಿಹಳ್ಳಿ, ನಾಗರಾಜ ಲಕ್ಕಪ್ಪಗೊಳ್, ವಿರೇಶ ಹುನಶಿಮರದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸುದ್ದಿ ಓದಿ