ದಕ್ಷಿಣ ಆಫ್ರಿಕಾ ಸಂಸತ್ತಿಗೆ ಕರ್ನಾಟಕದ ಕಿರುಹೊತ್ತಿಗೆ ಅರೆ್ಣ
Karnataka's brief to the South African Parliament
ಲೋಕದರ್ಶನ ವರದಿ
ಹಾವೇರಿ, ಸೆ.15 (ಕರ್ನಾಟಕ ವಾರ್ತೆ): ಕೇಪ್ಟೌನ್ನಲ್ಲಿ ನಡೆಯುತ್ತಿರುವ 69ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಮಂಡಲದ ನಿಯೋಗವು ದಕ್ಷಿಣ ಆಫ್ರಿಕಾ ಗಣರಾಜ್ಯದ ರಾಷ್ಟ್ರೀಯ ಸಭೆಯ ಸಭಾಧ್ಯಕ್ಷರಾದ ಥೋಕೊ ಡಿಡಿಜಾ ಅವರಿಗೆ ‘ಎ ಬ್ರೋಷರ್ ಆನ್ ಕರ್ನಾಟಕ’ ಎಂಬ ವಿಶೇಷ ಕಿರುಹೊತ್ತಿಗೆಯನ್ನು ಅರ್ಿಸಿತು.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಪ್ರತಿನಿಧಿಯಾಗಿ ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ವೀಕ್ಷಕರಾಗಿ ನೇತೃತ್ವ ವಹಿಸಿರುವ ಕರ್ನಾಟಕದ ನಿಯೋಗವು ಕೇಪ್ಟೌನ್ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿರುಹೊತ್ತಿಗೆಯನ್ನು ಹಸ್ತಾಂತರಿಸಿತು.
ಕರ್ನಾಟಕದ ಸಂಸದೀಯ ಪರಂಪರೆ, ಆಡಳಿತ ವ್ಯವಸ್ಥೆ, ಸಾಂಸ್ಕೃತಿಕ ವೈಭವ ಹಾಗೂ ಅಭಿವೃದ್ಧಿ ಸಾಧನೆಗಳನ್ನು ಅಂತರರಾಷ್ಟ್ರೀಯ ನಿಯೋಗಗಳಿಗೆ ಪರಿಚಯಿಸುವ ಉದ್ದೇಶದಿಂದ ಕಿರುಹೊತ್ತಿಗೆಯನ್ನು ಸಿದ್ಧಪಡಿಸಲಾಗಿದೆ. ಕರ್ನಾಟಕ ವಿಧಾನಮಂಡಲದ ಪರವಾಗಿ ಸಂಸದೀಯ ಸ್ನೇಹ ಮತ್ತು ಸೌಹಾರ್ದದ ಸಂಕೇತವಾಗಿ ಇದನ್ನು ಅರ್ಿಸಲಾಯಿತು.
ಬದಲಾಗುತ್ತಿರುವ ಜಾಗತಿಕ ವ್ಯವಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾನೂನು ಹಾಗೂ ಸಂಸದೀಯ ಪ್ರಜಾಪ್ರಭುತ್ವವನ್ನು ಬಲಪಡಿಸುವ ಉದ್ದೇಶದಿಂದ ಕಾಮನ್ವೆಲ್ತ್ ಸಮ್ಮೇಳನ ನಡೆಯುತ್ತಿದೆ. ಕಾಮನ್ವೆಲ್ತ್ನ ಒಂಬತ್ತು ಭೌಗೋಳಿಕ ಪ್ರದೇಶಗಳ ಸಭಾಧ್ಯಕ್ಷರು, ಸಭಾಪತಿಗಳು ಹಾಗೂ ಸಂಸದರು ಸೇರಿದಂತೆ 800ಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.
ಕರ್ನಾಟಕದ ನಿಯೋಗವು ಅಂತರ್ಸಂಸದೀಯ ಸಹಕಾರ, ಆರ್ಥಿಕತೆ ಮತ್ತು ವ್ಯಾಪಾರ, ಕೃತಕ ಬುದ್ಧಿಮತ್ತೆ, ಮಾನವ ಹಕ್ಕುಗಳು, ಶಾಂತಿ, ಹವಾಮಾನ ಬದಲಾವಣೆ ಹಾಗೂ ಸುಸ್ಥಿರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನಡೆಯುತ್ತಿರುವ ಗೋಷ್ಠಿ ಮತ್ತು ಕಾರ್ಯಾಗಾರಗಳಲ್ಲಿ ಭಾಗವಹಿಸುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 