ರೈಲ್ವೇಸ್ ತಂಡಕ್ಕೆ ಕಾಟ ನೀಡಿದ ಕರ್ನಾಟಕದ ವೇಗಿಗಳು
ನವದೆಹಲಿ, ಜ.27: ರಣಜಿ ಟೂರ್ನಿಯ ಎಲೈಟ್ ಎ ಗುಂಪಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಕರ್ನಾಟಕ ತಂಡದ ರೈಲ್ವೇಸ್ ತಂಡಕ್ಕೆ ಕಾಟ ನೀಡಿದೆ.
ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ಮುಂದಾದ ಕರುಣ್ ನಾಯರ್ ನಿರ್ಧಾರವನ್ನು ಬೌಲರ್ ಗಳು ಸಮರ್ಥಿಸಿಕೊಂಡರು. ಅನುಭವಿ ವೇಗಿ ಅಭಿಮನ್ಯು ಮಿಥುನ್ ಹಾಗೂ ಪ್ರತೀಕ್ ಜೈನ್ ಅವರ ಮಾರಕ ದಾಳಿಗೆ ಎದುರಾಳಿ ಬ್ಯಾಟ್ಸ್ ಮನ್ ಗಳು ರನ್ ಕಲೆ ಹಾಕುವಲ್ಲಿ ಎಡವಿದರು. ಮೃನಾಲ್ ದೇವಧರ್ 12 ರನ್ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್ ಮನ್ ಗಳು ಒಂದಂಕಿಯಲ್ಲಿ ಆಟ ಮುಗಿಸಿದರು.
ಆರಂಭದಲ್ಲಿ ವೇಗಿಗಳು ಸರಿಯಾದ ಲೈನ್ ಹಾಗೂ ಲೆಂಥ್ ನಲ್ಲಿ ದಾಳಿ ನಡೆಸಿ ರೈಲ್ವೇಸ್ ಬ್ಯಾಟ್ಸ್ ಮನ್ ಗಳನ್ನು ಕಟ್ಟಿಹಾಕಿದರು. ಮಿಥುನ್ 2 ಹಾಗೂ ಪ್ರತೀಕ್ 4 ವಿಕೆಟ್ ಕಬಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 