ಕರ್ನಾಟಕ ಸಂಭ್ರಮ-50: ರಥಯಾತ್ರೆಗೆ ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ
ಗಮನಸೆಳೆದ 500 ಮೀ. ಉದ್ದದ ಕನ್ನಡ ಬಾವುಟ ಮೆರವಣಿಗೆ
ಬಳ್ಳಾರಿ,ನ.16: ಬಳ್ಳಾರಿ ನಗರಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯನ್ನು ಗುರುವಾರ ಅತ್ಯಂತ ಸಂಭ್ರಮ-ಸಡಗರದಿಂದ ಬರ ಮಾಡಿಕೊಳ್ಳಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಿಂದ ಹಮ್ಮಿಕೊಂಡಿದ್ದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯ ಮೆರವಣಿಗೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕನ್ನಡ ಬಾವುಟ ಹಾರಿಸುವ ಮೂಲಕ ಸ್ವಾಗತಿಸಿದರು.
ಮೆರವಣಿಗೆಗೆ ಮುನ್ನ ವಿವಿಧ ಜಾನಪದ ನೃತ್ಯ ಕಲಾ ತಂಡಗಳಿಂದ ಕನ್ನಡ ಗಾಯನಗಳಿಗೆ ನೃತ್ಯ ಪ್ರದರ್ಶನ ನೀಡಿದ್ದು ಜನಮನ ಸೆಳೆಯಿತು, ನೋಡುಗರ ಚಪ್ಪಾಳೆಗಳ ನಡುವೆ ಸ್ಥಳೀಯ ಕಲಾವಿದರ ಹಲಗೆ, ತಾಷೆ-ರಾಂಡೋಲ್, ಕಂಸಾಳೆ, ವೀರಗಾಸೆ, ಡೊಳ್ಳು ಸೇರಿದಂತೆ ಕಲಾ ತಂಡಗಳಿಂದ ಭರ್ಜರಿ ಸಂಭ್ರಮದ ಮೆರವಣಿಗೆ ಆರಂಭಗೊಂಡಿತು.
ಮಹಾನಗರ ಪಾಲಿಕೆ ಉಪಮೇಯರ್ ಬಿ.ಜಾನಕಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಅಬಕಾರಿ ಉಪನೀರೀಕ್ಷಕ ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಮೇಶ್ ಬಾಬು, ತಹಸೀಲ್ದಾರ್ ಗುರುರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರ್ಪ ಸೇರಿದಂತೆ ಪಾಲಿಕೆ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಭಾಗವಹಿಸಿದ್ದರು.
*ಕಣ್ಮನ ಸೆಳೆದ ಕನ್ನಡದ ಧ್ವಜ:*
ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಯ ಅಂಗವಾಗಿ ಶಾಲಾ ಕಾಲೇಜು ಮಕ್ಕಳ ಕೈಯಲ್ಲಿ 500 ಮೀಟರ್ (ಅರ್ಧ ಕಿ.ಮೀ) ಉದ್ದದ ಕನ್ನಡ ಧ್ವಜದ ಮೆರವಣಿಗೆಯು ನೋಡುಗರನ್ನು ಆಕರ್ಷಿಸಿತು. ಇಂದು ನಗರಕ್ಕೆ ಆಗಮಿಸಿದ ಕನ್ನಡಮ್ಮನ ರಥಯಾತ್ರೆ ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ನೋಂದಣಿ ಕಚೇರಿಯವರೆಗೆ ಸಾಗಿ ಮರಳಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಸಂಗಂ ವೃತ್ತಕ್ಕೆ ಬಂದು ರಾಘವ ಕಲಾ ಮಂದಿರದವರೆಗೆ ಕೊನೆಗೊಂಡಿತು. ನಾಳೆ ನಗರದಿಂದ ಕುರುಗೋಡು ತಾಲ್ಲೂಕಿಗೆ ಪಯಣ ಬೆಳೆಸಲಿದೆ. ಮೆರವಣಿಗೆಯ ನಂತರ ಸಂಜೆ ರಾಘವ ಕಲಾಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ ಕನ್ನಡಪರ ಸಂಘಟನೆಗಳ ಸಾರಥ್ಯದಲ್ಲಿ ನಡೆದ ಈ ರಥಯಾತ್ರಗೆ ಶ್ರಮಿಸಿದ ಎಲ್ಲರಿಗೂ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.
ರೈತರು ತಮ್ಮ ಸಾಗುವಳಿ ಜಮೀನು ವಿವರ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಸೂಚನೆ
ಬಳ್ಳಾರಿ,ನ.16 : ರಾಜ್ಯ ಸರ್ಕಾರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳಡಿ ಜಿಲ್ಲೆಯ ರೈತರು ವಿವಿಧ ಸೌಲಭ್ಯಗಳನ್ನು ಪಡೆಯಲು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರೈತರ ಹಿತದೃಷ್ಠಿಯಿಂದ ಓಋ ಸಹಯೋಗದೊಂದಿಗೆ ಎಂಬ ಸಾಫ್ಟ್ವೇರ್ ಅಪ್ಲಿಕೇಷನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ರೈತರು ಕೃಷಿ ಅಥವಾ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದು, ರೇಷ್ಮೆ, ಡೈರಿ, ಪೌಲ್ಟ್ರಿ, ಮೀನುಗಾರಿಕೆ ಮುಂತಾದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಭಿನ್ನ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ, ಪ್ರತಿಯೊಂದು ಚಟುವಟಿಕೆಗೆ ವಿಭಿನ್ನ ಜ್ಞಾನ ಮತ್ತು ಅನುಭವದ ಅಗತ್ಯತೆ ಇರುತ್ತದೆ.
ಫ್ರೂಟ್ಸ್ ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ, ಬೆಳೆ ವಿಮೆ, ಬೆಳೆ ಪರಿಹಾರ ಮತ್ತು ಇನ್ನಿತರ ಯೋಜನೆಗಳಿಗೆ ಲಿಂಕ್ ಮಾಡಲಾಗಿರುತ್ತದೆ. ಆದ್ದರಿಂದ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸೇರಿಸಲು ಪಹಣಿ ಪತ್ರ ಮತ್ತು ಆಧಾರ್ ಸಂಖ್ಯೆ ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾದ ಬ್ಯಾಂಕ್ ಖಾತೆ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಕನ್ನಡ ಮತ್ತು ಸಂಸ್ಕೃತಿ ಇಲಾಖೆ; ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ನ.16 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ವಿವಿಧ ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಸೇವಾಸಿಂಧು ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ತನ್ಮೂಲಕ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟು ಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು ಮುಖಾಂತರ ಡಿಸೆಂಬರ್ 13ರವರೆಗೆ ಕಾಲಾವಕಾಶ ನೀಡಲಾಗಿದೆ.
ಸರ್ಕಾರದ ಆದೇಶದಂತೆ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ಸೈಟ್ ತಿತಿತಿ.ಞಚಿಟಿಟಿಚಿಜಛಿಡಿ.ಞಚಿಡಿಟಿಚಿಣಚಿಞಚಿ.ರಠ.ಟಿ ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.08022279954, ಮೊ.9986837037, 8792662814, 8792662816, 08022213530 ಅನ್ನು ಅಥವಾ ಆಯಾ ಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಕಚೇರಿ ಸಮಯದಲ್ಲಿ ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಹೊನ್ನುರ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಯಶಸ್ವಿನಿ ರಕ್ಷಣಾ ಯೋಜನೆಯಡಿ ನೋಂದಣಿಗೆ ಆಹ್ವಾನ
ಬಳ್ಳಾರಿ,ನ.16 : ಪ್ರಸ್ತಕ ಸಾಲಿನಲ್ಲಿ ರಾಜ್ಯ ಸರ್ಕಾರ ಮರು ಜಾರಿಗೊಳಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಲಾಭ ಪಡೆಯಲು ಸಹಕಾರ ಸಂಘಗಳು ಹೊಸ ಸದಸ್ಯರನ್ನು ನೋಂದಾಯಿಸಲು ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ. ಸಹಕಾರಿಗಳಿಗಾಗಿ ಯಶಸ್ವಿನಿ ರಕ್ಷಣಾ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಜಿಲ್ಲೆಯ ಸಹಕಾರಿಗಳು ಯಶಸ್ವಿನಿ ಯೋಜನೆಯ ಸದುಪಯೋಗಪಡಿಸಿಕೊಳ್ಳಲು ಜಿಲ್ಲೆಯ ಸಹಕಾರ ಸಂಘಗಳ ಹೊಸ ಸದಸ್ಯರು ಡಿ.31ರೊಳಗಾಗಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ರೈಲ್ವೇ ಸ್ಟೇಷನ್ ರಸ್ತೆಯ ಜನತಾ ಬಜಾರ್ ಕಟ್ಟಡದ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ ಅಥವಾ ಕಚೇರಿಯ ದೂ.08392-272635 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಆಧಾರ್ ಜೋಡಣೆ ಕಡ್ಡಾಯ
ಬಳ್ಳಾರಿ,ನ.16 :ರಾಜ್ಯ ಸರ್ಕಾರದ ವಿವಿಧ ಯೋಜನೆಗಳಾದ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು ಪಡೆಯುತ್ತಿರುವ ಬಳ್ಳಾರಿ ತಾಲೂಕು ಹಾಗೂ ಗ್ರಾಮಾಂತರ ವ್ಯಾಪ್ತಿಯ ಅರ್ಹ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಮತ್ತು ಅಂಚೆ ಖಾತೆಗಳಿಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಬೇಕು ಎಂದು ತಹಶೀಲ್ದಾರ ಗುರುರಾಜ ಅವರು ತಿಳಿಸಿದ್ದಾರೆ.
ಒಂದು ವೇಳೆ ಫಲಾನುಭವಿಗಳು ಆಧಾರ್ ಜೋಡಣೆಯನ್ನು ಮಾಡಿಸದಿದ್ದಲ್ಲಿ ಸರ್ಕಾರದಿಂದ ಪಾವತಿಸುವ ವೇತನವು ನವೆಂಬರ್ನಿಂದ ಸ್ಥಗಿತಗೊಳ್ಳಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ನ.18ರಂದು
ಬಳ್ಳಾರಿ,ನ.16: ಬಳ್ಳಾರಿ ನಗರ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ನ.18ರಂದು ಬೆಳಿಗ್ಗೆ 11 ಗಂಟೆಗೆ ನಗರ ಉಪ-ವಿಭಾಗದಲ್ಲಿ ನಡೆಸಲಾಗುವುದು. ಆದ್ದರಿಂದ ಎಲ್ಲಾ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ನಗರ ಜೆಸ್ಕಾಂ ನಗರ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಉಚಿತ ಬ್ಯೂಟಿಪಾರ್ಲರ್ ತರಬೇತಿ: ನೋಂದಣಿಗೆ ಆಹ್ವಾನ
ಬಳ್ಳಾರಿ,ನ.16 :ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.04ರಿಂದ ತರಬೇತಿ ಆರಂಭವಾಗಲಿದ್ದು, ತರಬೇತಿಯ ಅವಧಿಯು 30 ದಿನಗಳಾಗಿರುತ್ತದೆ. ಊಟ ವಸತಿಯೊಂದಿಗೆ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಕೌಶಲ್ಯದ ಜೊತೆಗೆ ಉದ್ಯಮಶೀಲತೆ, ವ್ಯಕ್ತಿತ್ವ ವಿಕಾಸನಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ.
ಈ ಕ್ಷೇತ್ರದಲ್ಲಿ ಪ್ರಾಥಮಿಕ ಜ್ಞಾನ ಹೊಂದಿರುವ ಹಾಗೂ ಬಿ.ಪಿ.ಎಲ್ ಕಾರ್ಡ್ ಹೊಂದಿದ್ದು ಕನ್ನಡವನ್ನು ಓದಲು ಹಾಗೂ ಬರೆಯಲು ಬರುವಂತಹ ನಿರುದ್ಯೋಗಿ ಸ್ವ-ಉದ್ಯೋಗ ಆಕಾಂಕ್ಷಿಗಳು ಮತ್ತು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಹತೆ ಕನಿಷ್ಟ 10ನೇ ತರಗತಿ ಪಾಸಾಗಿರಬೇಕು. ತರಬೇತಿಯ ಬಗ್ಗೆ ಪ್ರಾಥಮಿಕ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವದು.
35 ಜನರಿಗೆ ಮಾತ್ರ ತರಬೇತಿ ನೀಡಲಾಗುತ್ತಿದ್ದು, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ನಮ್ಮ ಸಂಸ್ಥೆಯಲ್ಲಿ ಈ ಮೊದಲು ತರಬೇತಿ ಪಡೆದವರು ಪುನಃ ತರಬೇತಿ ಪಡೆಯಲು ಅರ್ಹರಿರುವುದಿಲ್ಲ. ಆಸಕ್ತ ಅರ್ಹ ಅಭ್ಯರ್ಥಿಗಳು ತ್ವರಿತವಾಗಿ ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿ, ಸಂಬಂಧಿತ ವಿಷಯದಲ್ಲಿ ಇರುವ ಪ್ರಾಥಮಿಕ ಜ್ಞಾನ, ಅನುಭವ ಹೊಂದಿದವರು ಖುದ್ದಾಗಿ ಅಗತ್ಯ ಮಾಹಿತಿ ನೀಡಿ ಡಿ.01ರೊಳಗೆ ಹೆಸರು ನೊಂದಾಯಿಸಬಹುದು. ತರಬೇತಿಯಲ್ಲಿ ಪಾಲ್ಗೊಳ್ಳಲು ತಗುಲುವ ಪ್ರಯಾಣ ಭತ್ಯೆಯನ್ನು ತಾವೇ ಭರಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಡಿ.ಐ.ಸಿ ಕಾಂಪೌಂಡ್ನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕರ ಕಚೇರಿ ಅಥವಾ ದೂ.08392-299117, ಮೊ.9449860659, 9008464120 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.