ಗಡಿನಾಡಿನ ಕನ್ನಡಿಗರ ಸಮಸ್ಯೆಗೆ ಕರ್ನಾಟಕ-ಕೇರಳ ಸರಕಾರ ಸ್ಪಂದಿಸಲಿ: ಬೇವಿನಮರದ
Karnataka-Kerala governments should respond to the problems of Kannadigas in the border area: Neem t
ಶಿಗ್ಗಾವಿ 19 : ಗಡಿನಾಡಿನ ಸಮಸ್ಯೆಗಳ ಬಗ್ಗೆ ಕರ್ನಾಟಕ ಕೇರಳ ಸರಕಾರದ ಸ್ಪಂದನೆ ಅಗತ್ಯ. ಈ ನಿಟ್ಟಿನಲ್ಲಿ ಕೆಲಸಗಳು ನಡೆಯಬೇಕು ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಕುಡಾಲು ಮೇರ್ಕಳ ಸುಬ್ಬಯ್ಯಕಟ್ಟೆ ಅನುದಾನಿತ ಕ್ರಿಯಾ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಪದವನ್ನು ಉದ್ಘಾಟಿಸಿ ಮಾತನಾಡಿದ ಅವರು ಕನಾರ್ಟಕ ಸರ್ಕಾರ 6 ರಾಜ್ಯಗಳ ಜೊತೆಗೆ ಸಮನ್ವಯ ಸಾಧಿಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಮೂಲಕ ಅಲ್ಲಿನ ಸಮಸ್ಯೆಗಳನ್ನು ನಿರ್ವಹಿಸಲು ಎಲ್ಲ ಅಧಿಕಾರವನ್ನು ಸಿ.ಎಂ ಮತ್ತು ಡಿ.ಸಿ.ಎಂ ನೀಡಿದ್ದಾರೆ ಎಂದರು. ಜಿಪಂ ಸದಸ್ಯ, ಸೋಮಶೇಖರ ಜೆ.ಎಸ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕನಿಷ್ಠ ವೇತನ ಆಯೋಗದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲಾ ತಂಬರ್, ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 16 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ನೀಡುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 