ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ
Karnataka Rakshana Vedike outraged over actor Kamal Haasan's controversial statement
ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ
ಯಲಬುರ್ಗಾ 30: ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸುವಂತಹ ಘಟನೆಗಳು ಪದೇಪದೆ ನಡೆಯುತ್ತಿವೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಹೋಟೆಲ್ ಒಂದರ ಡಿಜಿಟಲ್ ಬೋರ್ಡ್‌ನಲ್ಲಿ ಕನ್ನಡಿಗರ ಬಗ್ಗೆ ಕೆಟ್ಟ ಪದವನ್ನು ಬಳಸಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬಾಲಿವುಡ್ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ನಾಲಿ ಹರಿಬಿಟ್ಟಿದ್ದರು. ಈ ಘಟನೆ ಚರ್ಚೆಯಲ್ಲಿರುವಾಗಲೇ ಬೆಂಗಳೂರಿನಲ್ಲಿ ಎಸ್‌ಬಿಐ ಮ್ಯಾನೇಜರ್ ಒಬ್ಬರು ಕನ್ನಡ ಮಾತನಾಡುವುದಿಲ್ಲ ಎಂದು ದರಿ್ದಂದ ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸಿದ್ದರು. ಇದೀಗ ಕಾಲಿವುಡ್ ಸೂಪರ್‌ಸ್ಟಾರ್ ಹಾಗೂ ಸಕಲಕಲಾವಲ್ಲಭ ಎಂದೇ ಖ್ಯಾತಿ ಗಳಿಸಿರುವ ನಟ ಕಮಲ್ ಹಾಸನ್ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಕನ್ನಡ ಹುಟ್ಟಿದ್ದೇ ತಮಿಳಿನಿಂದ ಎನ್ನುವ ಮೂಲಕ ಕನ್ನಡಿಗರಲ್ಲಿ ಆಕ್ರೋಶದ ಕಿಚ್ಚು ಹೊತ್ತಿಸಿದ್ದಾರೆ. ಇಡೀ ಕರ್ನಾಕದಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದ್ದು, ಕ್ಷಮೆ ಕೇಳುವಂತೆ ಆಗ್ರಹಿಸಲಾಗುತ್ತಿದೆ. ಒಂದು ವೇಳೆ ಕನ್ನಡಿಗರಿಗೆ ಕ್ಷಮೆ ಕೇಳದೇ ಹೋದಲ್ಲಿ ಜೂನ್-6 ರಂದು ಶುಕ್ರವಾರ ಅವರ ಥಗ್‌ಲೈಫ್" ಚಿತ್ರವನ್ನು ಕರ್ನಾಟಕದ ಯಾವುದೇ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳಿಸಲು ಕರ್ನಾಟಕ ರಕ್ಷಣಾ ವೇದಿಕೆಯು ಅವಕಾಶವನ್ನು ನೀಡುವುದಿಲ್ಲ ಎಂದು ಯಲಬುರ್ಗಾ ತಾಲೂಕು ಅಧ್ಯಕ್ಷ ಶಿವಕುಮಾರ ನಾಗನಗೌಡ್ರ ಇವರು ಪತ್ರಿಕೆಯ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 