10ರಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸಂಸ್ಥಾಪನಾ ದಿನಾಚರಣೆ
Karnataka Rashtra Samithi Party Foundation Day celebrated on 10th
10ರಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸಂಸ್ಥಾಪನಾ ದಿನಾಚರಣೆ
ಗದಗ 08: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಸ್ಥಾಪನೆಯಾಗಿ 6 ವರ್ಷವಾಗಿದ್ದು, ಆಗಸ್ಟ್- 10ನ್ನು ಸಂಸ್ಥಾಪನಾ ದಿನವನ್ನಾಗಿ ಆಚರಿಸಲಾಗುತ್ತಿದೆ. 2019 ರ ಅಗಸ್ಟ್ 10ರಂದು ಬೆಂಗಳೂರಿನಲ್ಲಿ ಪಕ್ಷವು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಮತ್ತು ಸಾಮಾಜಿಕ ಹೋರಾಟಗಾರರಾದ ಎಸ್. ಆರ್. ಹಿರೇಮಠ ಅವರಿಂದ ಉದ್ಘಾಟನೆಯಾಯಿತು.
ಕಳೆದ ಆರು ವರ್ಷಗಳಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತ, ಅಕ್ರಮ, ಅನ್ಯಾಯಗಳ ವಿರುದ್ಧ ಮತ್ತು ನಾಡು ನುಡಿಯ ಸಂರಕ್ಷಣೆಗಾಗಿ ಕೆ.ಆರ್.ಎಸ್ ಪಕ್ಷವು ನಿರಂತರವಾಗಿ ಹೋರಾಡುತ್ತಾ ಬಂದಿದ್ದು 6 ವರ್ಷಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಯವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪಕ್ಷದ ಸಂಘಟನೆ ಮಾಡಲಾಗಿದೆ ಮತ್ತು ಅನೇಕ ಹೋರಾಟಗಳನ್ನ ಅಭಿಯಾನಗಳನ್ನು ನಡೆಸಲಾಗಿದೆ ಎಂದು ಕೆ ಆರ್ ಎಸ್ ಪಕ್ಷದ ಗದಗ ಜಿಲ್ಲಾಧ್ಯಕ್ಷ ವೀರನಗೌಡ ಮೂಗನೂರತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರುಇದೇ ಆಗಸ್ಟ್ 10 ರಂದು ಪಕ್ಷದ ಸಂಸ್ಥಾಪನಾ ದಿನ ಹಾಗೂ ಮಹಾಧಿವೇಶನವನ್ನು ಮಂಡ್ಯ ನಗರದ ಜ್ಯೂಬ್ಲಿ ಪಾರ್ಕ್ ನಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ಮಂಡ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಿ ನಂತರ ಮಹಾಧಿವೇಶನ ಜರುಗಲಿದೆ. ಈ ಮಹಾಧಿವೇಶನದಲ್ಲಿ ರಾಜ್ಯದ ಎಲ್ಲಾ ಭಾಗಗಳ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಮತ್ತು ಬೆಂಬಲಿಗರು ಭಾಗವಹಿಸುತ್ತಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಕೆ ಆರ್ ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಫಾರೂಖ ಕಟ್ಟಿಮನಿ, ಗದಗ ತಾಲೂಕ ಅಧ್ಯಕ್ಷ ಕೃಷ್ಣ ವಡವಿ, ಯುವ ಘಟಕದ ಅಧ್ಯಕ್ಷ ರಾಜಾಭಕ್ಷ ಕೆಂಪಸಾಬನ್ನವರ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಬೇಪಾರಿ, ನೌಷಾದ್ ಅತ್ತಾರ, ಶರೀಫಸಾಬ ಬುವಾಜಿ, ಇರ್ಫಾನ್ ಮಲಬಾರ ಸೇರಿದಂತೆ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 