ಸಂಭ್ರಮದಿಂದ ನಡೆದ ನಾಮಧಾರಿ ಸಂಘದ ಕಾರ್ತಿಕ ದೀಪೋತ್ಸವ
Kartik Deepotsava of Namdhari Sangha was celebrated with enthusiasm
ಗೋಕರ್ಣ 17: ಇಲ್ಲಿಯ ಸಮೀಪದ ಹನೇಹಳ್ಳಿ-ಬಂಕಿಕೊಡ್ಲದ ಮುರ್ಕುಂಡಿದೇವ ನಾಮಧಾರಿ ಕ್ಷೇತ್ರಾಭಿವೃದ್ಧಿ ಸಂಘದ ವತಿಯಿಂದ 8ನೇ ವರ್ಷದ ಕಾರ್ತಿಕ ದೀಪೋತ್ಸವವು ಸಂಭ್ರಮ ಸಡಗರದಿಂದ ನಡೆಯಿತು. ದೇವಸ್ಥಾನದುದ್ದಕ್ಕು ವಿದ್ಯುತ್ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.
ಮುಂಜಾನೆ 10.30 ಕ್ಕೆ ಅಭಿಷೇಕ ಮತ್ತು ಪೂಜೆ ಸಂಜೆ 6 ರಿಂದ 7 ಗಂಟೆಯವರೆಗೆ ಭಜನಾ ಕಾರ್ಯಕ್ರಮ ನಡೆದು 7 ರಿಂದ ದೀಪಾರಾಧನೆ ನಡೆಯಿತು. 7.30 ರಿಂದ 8 ಗಂಟೆಯವರೆಗೆ ಕೋಲಾಟ, ರಾತ್ರಿ 8 ರಿಂದ ಗುಮಟೆ ಪಾಂಗ್ ವಾದನೆ, 8.30 ಕ್ಕೆ ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು.
ಪ್ರತಿಭಾ ಪುರಸ್ಕಾರದ ನಂತರ ಹನೇಹಳ್ಳಿಯ ಮುರ್ಕುಂಡಿ ದೇವಸ್ಥಾನದ ಆವರಣದಲ್ಲಿ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಚಂದ್ರಾವಳಿ ವಿಲಾಸ-ಕೃಷ್ಣಾತಂತ್ರ ಯಕ್ಷಗಾನ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಹಾಗೇ ದೇವಸ್ಥಾನದ ಹೊರಾಂಗಣದಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಭಾವಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೀಪ ಬೆಳಗಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 