ಶಾಸಕ ಸಿ. ಪುಟ್ಟರಂಗ ಶೆಟ್ಟಿಗೆ ಸಚಿವ ಸ್ಥಾನ ನೀಡಲು ಕಾರವಾರ ಭಗೀರಥ ಸಮಾಜ ಒತ್ತಾಯ

ಶಾಸಕ ಸಿ. ಪುಟ್ಟರಂಗ ಶೆಟ್ಟಿಗೆ ಸಚಿವ ಸ್ಥಾನ ನೀಡಲು ಕಾರವಾರ ಭಗೀರಥ ಸಮಾಜ ಒತ್ತಾಯ  Karwar Bhagiratha Samaj demands to give ministerial position to MLA C. Puttaranga Shetty

ಕಾರವಾರ 30 : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ನಾಯಕತ್ವ ಬದಲಾವಣೆಯ ಹಿನ್ನೆಲೆಯಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸಚಿವ ಸಂಪುಟದಲ್ಲಿ, ಉಪ್ಪಾರ ಸಮಾಜದ ಏಕೈಕ ಶಾಸಕರಾಗಿರುವ ಮೈಸೂರು ಜಿಲ್ಲೆಯ ಚಾಮರಾಜನಗರ ಮತಕ್ಷೇತ್ರದ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾರವಾರ ಭಗೀರಥ ಸಮಾಜದ ಹಿರಿಯ ಮುಖಂಡ ಫಕೀರ​‍್ಪ ಭಂಡಾರಿ ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.  

ಕಾರವಾರದ ಪತ್ರಿಕಾಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಈ ನಾಯಕತ್ವ ಬದಲಾವಣೆಯೊಂದಿಗೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದ್ದು, ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ಮಾಹಿತಿ ಇದೆ. ಈ ಸಂದರ್ಭದಲ್ಲಿ ನಮ್ಮ ಸಮಾಜಕ್ಕೆ ಯೋಗ್ಯ ಪ್ರಾತಿನಿಧ್ಯ ಸಿಗಬೇಕು ಎಂದರು. ರಾಜ್ಯದಲ್ಲಿ ಉಪ್ಪಾರ ಸಮಾಜವು ಸುಮಾರು 40 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ.  

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿದ್ದರೂ ಸಮಾಜವು ರಾಜಕೀಯವಾಗಿ ಮತ್ತು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದೆ. ಪ್ರಸ್ತುತ ಸಮಾಜದಿಂದ ಆಯ್ಕೆಯಾಗಿರುವ ಏಕೈಕ ಶಾಸಕರೆಂದರೆ ಸಿ. ಪುಟ್ಟರಂಗಶೆಟ್ಟಿ ಅವರು ಮಾತ್ರ. ಕಳೆದ ಬಾರಿ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಸಮಾಜಕ್ಕೆ ಅನ್ಯಾಯವಾಗಿದ್ದು, ಈ ಬಾರಿ ಆ ಅನ್ಯಾಯವನ್ನು ಸರಿದೂಗಿಸಬೇಕಿದೆ. ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ದೃಷ್ಟಿಯಿಂದ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಿಕೊಡಬೇಕು ಎಂದು ಅವರು ಮಾಧ್ಯಮಗಳ ಮೂಲಕ ಹೈಕಮಾಂಡ್ಗೆ ಮನವಿ ಮಾಡಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಭಗೀರಥ ಸಮಾಜದ ಪ್ರಮುಖರಾದ ಶರಣಪ್ಪ, ಷಣ್ಮುಖ, ಸುಭಾಷ್ ಪೂಜಾರಿ ಹಾಗೂ ದೇವೇಂದ್ರ​‍್ಪ ಬಸ್ಸಾಪುರ, ರಮೇಶ ಉಪಸ್ಥಿತರಿದ್ದರು.