ಕಡಲ ಕೊರೆತ ಪ್ರದೇಶಕ್ಕೆ ವಿ. ಪ. ಸದಸ್ಯ ಉಳ್ವೇಕರ್ ಮತ್ತು ಡಿಸಿ ಲಕ್ಷ್ಮೀಪ್ರಿಯಾ ಭೇಟಿ
Karwar News- 08-07
ಕಾರವಾರ 08: ಕಳೆದ ಒಂದು ವಾರದಿಂದ ಕಾರವಾರ ತಾಲೂಕಿನ ಹಾರವಾಡ ಕಡಲ ತೀರದಲ್ಲಿ ಸಮುದ್ರದ ಕೊರತೆ ತೀವೃಗೊಂಡಿದ್ದು, ಕಡಲ ಆರ್ಭಟಕ್ಕೆ ತಡೆಗೋಡೆ, ಉಸುಕಿನ ದಿಬ್ಬಗಳು ಸಹ ನೀರು ಪಾಲಾಗುತ್ತಿರುವ ಹಿನ್ನಲೆ ಮಂಗಳವಾರ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅವರು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರೀಯಾ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಕಡಲ ಕೊರೆತ ಸಮಸ್ಯೆಯ ಬಗ್ಗೆ ಸೋಮವಾರ ಹಾರವಾಡ ಗ್ರಾಮಸ್ಥರು, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಅವರಿಗೆ ಮನವಿ ಮಾಡಿದ್ದರು. ಈ ವಿಷಯದ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. , ಈ ಸಂಬಂಧ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸಮಸ್ಯೆಗೆ ಸ್ಪಂದಿಸಿ, ಮಂಗಳವಾರ ಬಂದರು ಇಲಾಖೆ ಅಧಿಕಾರಿಗಳು ಹಾಗೂ ಅಂಕೋಲಾ ತಹಶಿಲ್ದಾರ್ ಮೀನುಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಮೀನುಗಾರರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಸಮುದ್ರ ಕೊರತೆ ನಿಯಂತ್ರಿಸಲು ಹಾಗೂ ತಡೆಗೋಡೆ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 