ಕಸಾಪ ಗೌರವ ಕಾರ್ಯದರ್ಶಿ, ಕೋಶಾಧ್ಯಕ್ಷರಿಗೆ ಸನ್ಮಾನ
ಲೋಕದರ್ಶನ ವರದಿ
ಮುಂಡಗೋಡ: ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲೂಕು ಘಟಕಗಳ ಆಶ್ರಯದಲ್ಲಿ ಇತ್ತೀಚೆಗೆ ಜರುಗಿದ ತಾಲೂಕಿನ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕ.ಸಾ.ಪ. ಕಾರ್ಯಕಾರಿ ಸಮಿತಿ ಗೌರವ ಕಾರ್ಯದರ್ಶಿಗಳಾದ ಸೋಮು ಮುಡೆಣ್ಣವರ, ವಿನಾಯಕ ಶೇಟ್ ಮತ್ತು ಗೌರವ ಕೋಶಾಧ್ಯಕ್ಷ ನಾಗರಾಜ ಅರ್ಕಸಾಲಿ ಇವರನ್ನು ಸನ್ಮಾನಿಸಲಾಯಿತು.
ಈ ವೇಳೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಮಾಜಿ ಶಾಸಕ ವಿ.ಎಸ್.ಪಾಟೀಲ, ಕ.ಸಾ.ಪ. ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ, ಸಮ್ಮೇಳನಾಧ್ಯಕ್ಷ ಚಿದಾನಂದ ಪಾಟೀಲ, ತಾಲೂಕು ಘಟಕದ ಅಧ್ಯಕ್ಷ ಸಹದೇವಪ್ಪ ನಡಿಗೇರ, ಧಾರವಾಡ ಕೆಇಬೊಡ್ಸರ್್ನ ಕನ್ನಡ ಉಪನ್ಯಾಸಕ ಸಾಹಿತಿ ಜಿ.ಬಿ.ಕುಲಕರ್ಣಿ, ವಿಶ್ರಾಂತ ಪ್ರಾಚಾರ್ಯ ಸಾಹಿತಿ ಶ್ರೀರಂಗ ಕಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ದಯಾನಂದ ನಾಯ್ಕ, ಸುಭಾಸ ಡೋರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.