ಕಸಾಪ ಅಧ್ಯಕ್ಷ ಡಾ. ಮಹೇಶ ಜೋಷಿ ವಿರುದ್ದ ದಂಗೆ ಎದ್ದ ಕೆಲ ಸಾಹಿತಿಗಳು : ಬೆಂಗಳೂರಿನ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾದ ಸಮಾನ ಮನಸ್ಕರರು
ಬೆಳಗಾವಿ : ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ ಜೋಷಿಯವರು ದುರಾಡಳಿತವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇದಕ್ಕೆ ಖಂಡನೆ ವ್ಯಕ್ತಪಡಿಸಿ ಭಾರಿ ಪ್ರತಿಭಟನಾ ಸಭೆ ನಡೆಸಲು ಬೆಂಗಳೂರಿನ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದು, ಬೆಳಗಾವಿಯ ಕೆಲವು ಸಾಹಿತಿಗಳು ಕೂಡಾ ಈ ಸಭೆಗೆ ಭಾಗಿಯಾಗಲು ಅನಿಯಾಗುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಷಿ ಅವರು ದುರಾಡಳಿತವನ್ನು ನಡೆಸುತ್ತಿದ್ದು, ಅದರ ವಿರುದ್ದವಾಗಿ ಬೆಂಗಳೂರಿನ ಸಮಾನ ಮನಸ್ಕರ ವೇದಿಕೆ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ದಿ. ಜೂ. 12ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದಲ್ಲಿ ಈ ಪ್ರತಿಭಟನೆ ನಡೆಸಲಿದ್ದಾರೆ.
ಈ ಪ್ರತಿಭಟನೆಯಲ್ಲಿ ಸಾಹಿತಿಗಳು, ಕವಿಗಳು, ಲೇಖಕರು, ಸಾಹಿತ್ಯಾಭಿಮಾನಿಗಳು, ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎನ್ನುವ ಕುರಿತು ಬೆಳಗಾವಿಯ ಸಾಹಿತಿಗಳು ಪ್ರಕಟನೆಯನ್ನು ಹೊರಡಿಸಿದ್ದಾರೆ.