ಕಾಶ್ಮೀರ್ ಫೈಲ್ಸ್ ಚಲನಚಿತ್ರ ವೀಕ್ಷಣೆ
ಬಳ್ಳಾರಿ 31: ಬಳ್ಳಾರಿ ನಗರ ಬಿಜೆಪಿ ಘಟಕದ ವತಿಯಿಂದ ಬಿಜೆಪಿಯು ಮುಖಂಡ ಗಾಲಿ ಶ್ರವಣ್ಕುಮಾರ್ ರೆಡ್ಡಿ ಅವರ ನೇತೃತ್ವದಲ್ಲಿ ನಗರದ ಉಮಾ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿರುವ ಕಾಶ್ಮೀರ್ ಫೈಲ್ಸ್ ಚಲನಚಿತ್ರವನ್ನು ಸುಮಾರು 150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಬುಧವಾರ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಬಿಜೆಪಿ ನಗರ ಅಧ್ಯಕ್ಷ ಕೆ.ಬಿ.ವೆಂಕಟೇಶ್ವರ, ಪ್ರಧಾನ ಕಾರ್ಯದರ್ಶಿಗಳಾದ ರಾಮಾಂಜಿನಿ, ಸುನೀಲ್ರೆಡ್ಡಿ, ಬಿಜೆಪಿ ಬಳ್ಳಾರಿ ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ರಾಜೀವ್ ತೊಗರಿ, ಬಿಜೆಪಿ ಓಬಿಸಿ ಮೋರ್ಚಾ ನಗರ ಅಧ್ಯಕ್ಷ ಸಂದೀಪ್ ನಂದಿಪಿ, ಜಿಲ್ಲಾ ಕಾರ್ಯದರ್ಶಿ ಮನೋಹರ್, ಯುವ ಮೋರ್ಚಾ ನಗರ ಅಧ್ಯಕ್ಷ ಅರುಣ್ ಬಾಲಚಂದ್ರ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಗುಣಾ, ಕರ್ನಾಟಕ ರಾಜ್ಯ ಬಿಜೆಪಿ ಮಹಿಳಾ ಉಪಾಧ್ಯಕ್ಷೆ ಶಿವಕೃಷ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ. ಅರುಣಾ, ನಗರ ಮಹಿಳಾ ಅಧ್ಯಕ್ಷೆ ಜ್ಯೋತಿಪ್ರಕಾಶ್, ಪದ್ಮಾವತಿ, ಜಿಲ್ಲಾ ಕಾರ್ಯದರ್ಶಿ ಸುಮಾರೆಡ್ಡಿ, ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ್, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ರಾಮಕೃಷ್ಣ, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷ ವೀರೇಶ್, ಎಸ್.ಸಿ. ಮೋರ್ಚಾ ನಗರ ಅಧ್ಯಕ್ಷ ರಾಜೇಶ್, ಹಿರಿಯ ನಾಗರಿಕ ಪ್ರಕೋಷ್ಠ ಸಂಚಾಲಕ ಸುಬ್ಬರಾವ್, ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೆಹಬೂಬ್, ಕಾರ್ತೀಕ್, ಷಣ್ಮುಖ್ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಚಲನಚಿತ್ರವನ್ನು ವೀಕ್ಷಿಸಿದರು.