ಮನೆಕಳ್ಳತನ ಪ್ರಕರಣ ಭೇದಿಸಿದ ಕೌಲ್ಬಜಾರ್ ಪೊಲೀಸರು: 16.80 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ
Kaulbazar police crack house robbery case: Gold, silver, cash worth Rs 16.80 lakh seized
ಬಳ್ಳಾರಿ 04: ನಗರದಲ್ಲಿ ಕೌಲ್ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಮನೆಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ?16.80 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸುಮನ್ ಡಿ. ಪನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್ ಹಾಗೂ ಬಳ್ಳಾರಿ ನಗರ ಉಪವಿಭಾಗದ ಡಿಎಸ್ಪಿ ಗೋವಿಂದ ರಾಜು ಅವರ ಮಾರ್ಗದರ್ಶನದಲ್ಲಿ, ಕೌಲ್ಬಜಾರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಷಣ್ಮುಖಪ್ಪ ಜಿ.ಆರ್. ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು.ಕಾರ್ಯಾಚರಣೆಯ ವೇಳೆ ಜಾನಕುಂಟೆ ತಾಂಡದ ಅನಿಲ್ ಕುಮಾರ್ ನಾಯ್ಕ ಹಾಗೂ ಮಲ್ಲಿಕಾರ್ಜುನ ನಾಯ್ಡ್ ಅಲಿಯಾಸ್ ಲಂಬಾಣಿ ಮಲ್ಲಿ ಅವರನ್ನು ಮೇ 30ರಂದು ಬಂಧಿಸಿ ವಿಚಾರಣೆ ನಡೆಸಲಾಯಿತು.
ವಿಚಾರಣೆ ವೇಳೆ ಆರೋಪಿಗಳು ಠಾಣೆ ವ್ಯಾಪ್ತಿಯ 11 ಮನೆಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿತರಿಂದ ಠಾಣಾ ಗುನ್ನೆ ಸಂಖ್ಯೆ 115/2026 ಸೇರಿದಂತೆ ಒಟ್ಟು 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 15.90 ಲಕ್ಷ ಮೌಲ್ಯದ 159 ಗ್ರಾಂ ಬಂಗಾರದ ಆಭರಣಗಳು, 70 ಸಾವಿರ ಮೌಲ್ಯದ 350 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ 20 ಸಾವಿರ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 16.80 ಲಕ್ಷ ಮೌಲ್ಯದ ಕಳುವಾದ ಆಸ್ತಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಈ ಕಾರ್ಯಾಚರಣೆಯಲ್ಲಿ ಡಿಎಸ್ಪಿ ಗೋವಿಂದ ರಾಜು, ಪಿಐ ಷಣ್ಮುಖಪ್ಪ ಜಿ.ಆರ್., ಪಿಎಸ್‌ಐಗಳಾದ ನಿಂಗಪ್ಪ, ರವಿ, ಲಾರೆನ್ಸ್, ತೇಜೋ ವಿಕಾಸ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ನಾಗರಾಜ, ಅನ್ವರ್ ಬಾಷಾ, ಸೋಮಪ್ಪ, ಠಾಕೂರ್ ನಾಯ್ಕ, ಜಡಿಯಪ್ಪ, ಶ್ರೀನಿವಾಸ ಮತ್ತು ಶಾಂತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸುಮನ್ ಡಿ. ಪನ್ನೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 