ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಷೇಧಿಸಲು ಕೇಜ್ರಿವಾಲ್ ಆಗ್ರಹ
Kejriwal demands ban on loan waiver of billionaires
ನವದೆಹಲಿ 28: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಪತ್ರವೊಂದನ್ನು ಬರೆದು ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಷೇಧಿಸಲು ರಾಷ್ಟ್ರವ್ಯಾಪಿ ಕಾನೂನು ರೂಪಿಸುವಂತೆ ಒತ್ತಾಯಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಸಾವಿರಾರು ಕೋಟಿ ಮೌಲ್ಯದ ಕಾರ್ಪೋರೇಟ್ ಸಾಲಗಳನ್ನು ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರವು ಶ್ರೀಮಂತರ ಪರ ನಿಂತಿದೆ ಎಂದು ಆರೋಪಿಸಿದರು. ಕಾರ್ಪೋರೇಟ್ ಸಾಲ ಮನ್ನಾದಿಂದ ತೆರಿಗೆ ಹೊರೆಯು ಸಾಮಾನ್ಯ ಜನರ ಮೇಲೆ ಬೀಳುತ್ತಿದ್ದು, ಇದರ ಲಾಭವನ್ನು ಶ್ರೀಮಂತರು ಪಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.
ಇದೊಂದು ದೊಡ್ಡ ಹಗರಣವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಮಯ ಬಂದಿದೆ ಎಂದು ಹೇಳಿದರು.
ಸಾಮಾನ್ಯ ಜನರು ತಮ್ಮ ಅರ್ಧದಷ್ಟು ಸಂಬಳವನ್ನು ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ಶ್ರೀಮಂತರ ಸಾಲಗಳು ಮನ್ನಾ ಆಗುತ್ತಿವೆ. ಕೇಂದ್ರ ಸರ್ಕಾರವು ಸಾಮಾನ್ಯ ಜನರ ಗೃಹ ಸಾಲ, ವಾಹನ ಸಾಲ ಮತ್ತು ಇತರ ಆರ್ಥಿಕ ಹೊರೆಯನ್ನು ಮನ್ನಾ ಮಾಡುವುದಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
ಕೋಟ್ಯಧಿಪತಿಗಳ ಸಾಲ ಮನ್ನಾ ಮಾಡುವುದನ್ನು ನಿಲ್ಲಿಸುವುದರಿಂದ ಆದಾಯ ತೆರಿಗೆ ಮತ್ತು ಜಿಎಸ್‌ಟಿ ದರಗಳನ್ನು ಅರ್ಧದಷ್ಟು ಕಡಿಮೆ ಮಾಡಲು, ತೆರಿಗೆ ವಿಧಿಸಬಹುದಾದ ಆದಾಯ ಮಿತಿಯನ್ನು ದ್ವಿಗುಣಗೊಳಿಸಲು, ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕಲು ಸರ್ಕಾರಕ್ಕೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 