ಕೆಂಪೇಗೌಡರು ನಮಗೆಲ್ಲ ಆದರ್ಶವಾಗಿದ್ದಾರೆ; ಸಭಾಪತಿ ಬಸವರಾಜ ಹೊರಟ್ಟಿ
ಧಾರವಾಡ ಜೂ.27: ನಾಡ ಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ವಿಶ್ವ ಪ್ರಸಿದ್ಧಿಯಾಗಿದೆ. ಅವರ ದೂರದೃಷ್ಟಿಯಿಂದ ಬೆಂಗಳೂರು ಬೆಳೆದಿದೆ ಎಂದು ಕರ್ನಾಟಕ ವಿಧಾನ ಪರಿಷತ್ತ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.
ಅವರು ಇಂದು (ಜೂ.27) ಬೆಳಿಗ್ಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ, ಮಾತನಾಡಿದರು.
ನಾಡುಪ್ರಭು ಕೆಂಪೇಗೌಡರ ಮುಂದಾಲೋಚನೆಯಿಂದ ಸಮಗ್ರ ಅಭಿವೃದ್ಧಿಯ ಬೆಂಗಳೂರು ನಿರ್ಮಾಣವಾಗಿದೆ. ಇಂದು ಬೃಹತ್ ಬೆಂಗಳೂರು ಆಗಿ ಬದಲಾಗಿದೆ. ಕೆಂಪೇಗೌಡರ ನಿಸ್ವಾರ್ಥ ಮತ್ತು ನಾಡಿನ ಕಳಕಳಿಯ ದ್ಯೋತಕವಾಗಿ ಬೆಂಗಳೂರು ಬೆಳೆದು ಬಂದಿದೆ ಎಂದು ಅವರು ಹೇಳಿದರು.
ಕೆಂಪೇಗೌಡರ ಬದುಕು, ಅಡಳಿತ ಮತ್ತು ಜೀವನ ಸಾಧನೆಗಳನ್ನು ಯುವಕರಿಗೆ, ವಿದ್ಯಾರ್ಥಿಗಳಿಗೆ ಪರಿಚಯಿಸುವ ಅಗತ್ಯವಿದೆ. ಮಕ್ಕಳಲ್ಲಿ ನಾಡಪ್ರಭು ಕೆಂಪೇಗೌಡರ ಗುಣಗಳನ್ನು ಬೆಳೆಸಬೇಕು. ಈ ನಿಟ್ಟಿನಲ್ಲಿ ಅವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಿ, ಪರಿಣಾಮಕಾರಿ ಬೋಧನೆ ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೀತಾ.ಸಿ.ಡಿ. ಅವರು ಮಾತನಾಡಿ, ನಾಡಪ್ರಭು ಕೆಂಪೇಗೌಡರು ಕನ್ನಡ ನಾಡಿನ ಹೆಮ್ಮೆ. ಬಡವರ ಒಡೆಯ ಮತ್ತು ಬೆಂಗಳೂರು ನಗರದ ಶಿಲ್ಪಿಯಾಗಿದ್ದಾರೆ. ಅವರು ಕೇವಲ ಒಂದು ನಗರ ನಿರ್ಮಾಪಕರಾಗಿಯಲ್ಲ, ಶ್ರೇಷ್ಠ ಆಡಳಿತಗಾರ, ಪ್ರಜಾಪಾಲಕ ಮತ್ತು ದೂರದೃಷ್ಟಿಯ ನಾಯಕರಾಗಿದ್ದರು ಎಂದು ಅವರು ಹೇಳಿದರು.
ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಆಳ್ವಿಕೆ ನಡೆಸಿದ್ದು, ತಮ್ಮ ಪ್ರತಿಭೆ ಮತ್ತು ಜಾಣ್ಮೆಯಿಂದ ಇತಿಹಾಸದಲ್ಲಿ ಅಮರರಾಗಿದ್ದಾರೆ. ಬೆಂಗಳೂರು ನಗರವನ್ನು ಅವರು ಯೋಜಿತವಾಗಿ ನಿರ್ಮಿಸಿದರು. ರಸ್ತೆ, ಮಾರುಕಟ್ಟೆ, ಕೆರೆ, ದೇವಾಲಯಗಳನ್ನು ಕಟ್ಟಿಸುವ ಮೂಲಕ ಜನಜೀವನ ಸುಲಭವಾಗುವಂತೆ ಮಾಡಿದರು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ. ಬಸವರಾಜ ಅಕ್ಕಿ ಅವರು ನಾಡಪ್ರಭು ಶ್ರೀ ಕೆಂಪೇಗೌಡರ ಅವರ ಜೀವನ ಚರಿತ್ರೆ ಕುರಿತು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂಶ ಸಿದ್ದನಗೌಡರ, ಸಿಪಿಐ ಶಿವಾನಂದ ಕಟಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಮಕೃಷ್ಣ ಸದಲಗಿ, ಅಶೋಕ ಸಿಂದಗಿ ಇದ್ದರು.
ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೆಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.
ನಾಡಪ್ರಭು ಶ್ರೀ ಕೆಂಪೇಗೌಡರ ಕುರಿತು ಹಲವು ಸ್ಪರ್ಧೆಗಳನ್ನು ಏರಿ್ಡಸಲಾಗಿತ್ತು. ಅವುಗಳಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಹಾಗೂ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು.