ಕೇರಳ ರಾಜ್ಯಪಾಲರಿಗೂ ಅಮರಿಕೊಂಡ ಕೊರೋನ ಸೋಂಕು
ತಿರುವನಂತಪುರಂ, ನವೆಂಬರ್, 7: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಈ ಕುರಿತು ಸ್ವತಃ ರಾಜ್ಯಪಾಲರೇ ಟ್ವೀಟ್ ಮಾಡಿದ್ದಾರೆ ನನಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಚಿತವಾಗಿದೆ. ಆದರೂ ಸೋಂಕಿಗೆ ಸಂಬಂಧಿಸಿದ ಯಾವುದೇ ಲಕ್ಷಣಗಳು ಇರಲಿಲ್ಲ. ಕಳೆದ ವಾರ ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆಯೂ,. ಅಗತ್ಯವಿದ್ದಲ್ಲಿ ಕೊರೊನಾ ಸೋಂಕಿನ ತಪಾಸಣೆ ಮಾಡಿಸಿಕೊಳ್ಳುವಂತೆ ರಾಜ್ಯಪಾಲರು ಮನವಿ ಮಾಡಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಈಗಾಗಲೇ 4.73 ಲಕ್ಷದ ಗಡಿ ದಾಟಿದ್ದು ಇವರ ಪೈಕಿ 3,88,504 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಮಹಾಮಾರಿ ಕೊರೋನಗೆ 1641 ರೋಗಿಗಳು ಬಲಿಯಾಗಿದ್ದಾರೆ.