ಕೇರಿಈರ್ಪ ಅಜ್ಜನ ಪಲ್ಲಕ್ಕಿ ಮೆರವಣಿಗೆ ಉತ್ಸವ
Keri Iirappa Ajja's Palanquin Procession Festival
ಲೋಕದರ್ಶನ ವರದಿ
ಯಮಕನಮರಡಿ, ಆ.23: ಸಮೀಪದ ದಾದಾಬಾನಹಟ್ಟಿ ಗ್ರಾಮದ ಹೊರವಲಯದಲ್ಲಿರುವ ಕೇರಿ ಈರ್ಪ ಅಜ್ಜನ ಜಾತ್ರೆಯ ಅಂಗವಾಗಿ ಆ.24ರಂದು ಪಲ್ಲಕ್ಕಿ ಉತ್ಸವ ಹಾಗೂ ಮೆರವಣಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ದೇವಸ್ಥಾನದ ಅರ್ಚಕರಾದ ಈರ್ಪ ಶರಣರು ತಿಳಿಸಿದ್ದಾರೆ.
ಜಾತ್ರೆಯ ಅಂಗವಾಗಿ ಸೋಮವಾರ ಬೆಳಗ್ಗೆ ಭಕ್ತರು ನೂತನವಾಗಿ ನಿರ್ಮಿಸಿರುವ ಪಲ್ಲಕ್ಕಿಗೆ ಶಾಸ್ತ್ರೋಕ್ತವಾಗಿ ಹೋಮ, ಪೂಜೆ, ವಾಸ್ತುಪೂಜೆ ಹಾಗೂ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಯಮಕನಮರಡಿ ಸಮೀಪದ ಸುಕ್ಷೇತ್ರ ಹರಿಮಂದಿರದ ಪೂಜ್ಯ ಸದ್ಗುರು ಆನಂದ ಮಹಾರಾಜ ಗೋಸಾವಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಹೋಮ-ಹವನ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ದಾದಾಬಾನಹಟ್ಟಿ ಗ್ರಾಮದ ಪಶ್ಚಿಮ ಭಾಗದಲ್ಲಿರುವ ಸ್ವಯಂಭೂ ಆಲದ ಮರದ ಸ್ಥಳದಲ್ಲಿ ವೀರ್ಪ ಅಜ್ಜನವರು ವಾಸವಾಗಿದ್ದಾರೆ ಎಂಬುದು ಹಿರಿಯರ ನಂಬಿಕೆಯಾಗಿದೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಈ ಆಲದ ಮರದ ಕಾರಣದಿಂದಲೇ ಈ ಸ್ಥಳವನ್ನು ಕೇರಿ ಈರ್ಪ ಅಜ್ಜನ ಕ್ಷೇತ್ರ ಎಂದು ಕರೆಯಲಾಗುತ್ತದೆ.
ಇದು ಭಕ್ತರ ನಂಬಿಕೆಯ ಪ್ರಮುಖ ಆಧ್ಯಾತ್ಮಿಕ ಕ್ಷೇತ್ರವಾಗಿದ್ದು, ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಭಕ್ತರು ಆಗಮಿಸಿ ತಮ್ಮ ಕಷ್ಟ-ಕಾರ್ಪಣಯಗಳನ್ನು ನಿವಾರಿಸಿಕೊಳ್ಳುವ ಸಂಪ್ರದಾಯವಿದೆ. ಅರ್ಚಕರು ಭಕ್ತರಿಂದ ಯಾವುದೇ ರೀತಿಯ ದೇಣಿಗೆ ಅಥವಾ ಕಾಣಿಕೆ ನೀರೀಕ್ಷಿಸುವುದಿಲ್ಲ. ಪ್ರತಿವರ್ಷ ಶ್ರಾವಣ ಮಾಸದ ಎರಡನೇ ಸೋಮವಾರ ಜಾತ್ರೆಯನ್ನು ಭಕ್ತರ ಸಹಕಾರದೊಂದಿಗೆ ನಡೆಸಿಕೊಂಡು ಬರಲಾಗುತ್ತಿದೆ.
ಜಾತ್ರೆಯ ಸಂದರ್ಭದಲ್ಲಿ ಯಾವುದೇ ರೀತಿಯ ದೇಣಿಗೆ ಸ್ವೀಕರಿಸದೆ, ಎಲ್ಲ ಕಾರ್ಯಕ್ರಮಗಳನ್ನು ಸ್ವತಂತ್ರವಾಗಿ ನಡೆಸಿಕೊಂಡು ಬರುತ್ತಿರುವುದು ಕ್ಷೇತ್ರದ ವಿಶೇಷತೆಯಾಗಿದೆ. ಸುಮಾರು ಒಂದು ಎಕರೆ ವಿಸ್ತೀರ್ಣದಲ್ಲಿರುವ ಸ್ವಯಂಭೂ ಆಲದ ಮರ ಹಾಗೂ ಕ್ಷೇತ್ರದ ಆಧ್ಯಾತ್ಮಿಕ ಮಹತ್ವದಿಂದಾಗಿ ಇದು ಭಕ್ತರನ್ನು ಆಕರ್ಷಿಸುತ್ತಿದೆ. ವಿಶ್ವಾಸದಿಂದ ಬರುವ ಭಕ್ತರನ್ನು ಕಾಪಾಡಿ, ದುಷ್ಟಶಕ್ತಿಗಳನ್ನು ದೂರ ಮಾಡುವ ಶಕ್ತಿಯನ್ನು ಕ್ಷೇತ್ರ ಹೊಂದಿದೆ ಎಂಬ ನಂಬಿಕೆ ಭಕ್ತರಲ್ಲಿ ಇದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 