ಖೇಲೋ ಇಂಡಿಯಾ: ಬಾಲಕಿಗೆ ಚುಚ್ಚಿದ ಬಾಣ, ಪ್ರಾಣಾಪಾಯದಿಂದ ಪಾರು
ನವದೆಹಲಿ, ಜ ೧೦ ಬಿಲ್ಲುಗಾರಿಕೆ ಅಭ್ಯಾಸ ನಡೆಸುತ್ತಿರುವ ವೇಳೆ ಬಾಲಕಿಯ ಭುಜಕ್ಕೆ ಬಾಣ ಚುಚ್ಚಿರುವ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಅದೃಷ್ಟವಶಾತ್ ಯುವ ಆರ್ಚರಿ ಪಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗುವಾಹಟಿಯ ದಿಬ್ರುಗರ್ ಜಿಲ್ಲೆಯ ಚಬುವಾದಲ್ಲಿ ಆರ್ಚರಿ ಅಭ್ಯಾಸ ನಡೆಸುತ್ತಿದ್ದ ವೇಳೆ 12ರ ಹರೆಯದ ಬಾಲಕಿ ಶಿವಾಂಗಿನಿ ಗೋಹೈನ್ ಭುಜಕ್ಕೆ ತೀಕ್ಷ್ಣವಾದ ಬಾಣ ಚುಚ್ಚಿಕೊಂಡಿದೆ. ಆರಂಭದಲ್ಲಿ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಅನಾಹುತ ಸಂಭವಿಸಿದೆ ಎಂಬ ವರದಿಗಳು ಬಂದಿತ್ತು. ಬಳಿಕ ಅಸ್ಸಾಂ ಆರ್ಚರಿ ಅಸೋಸಿಯೇಷನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದೆ.ಶಿವಾಂಗಿನಿ ಖೇಲೋ ಇಂಡಿಯಾ ಟೂರ್ನಿಯಲ್ಲಿ ಭಾಗವಹಿಸಲು ಅಭ್ಯಾಸ ನಡೆಸುತ್ತಿದ್ದರು ಎನ್ನಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯ್) ಕೇಂದ್ರದಲ್ಲಿ ಘಟನೆ ನಡೆದಿದ್ದು, ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಬಾಲಕಿ ಈಗ ಚೇತರಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಕಿಯ ಬೇಕಾಗಿರುವ ಚಿಕಿತ್ಸೆಯ ಎಲ್ಲ ವೆಚ್ಚವನ್ನು ಭರಿಸುವುದಾಗಿ ಭಾರತೀಯ ಕ್ರೀಡಾ ಪ್ರಾಧಿಕಾರ ಘೋಷಿಸಿದೆ. ಖೆಲೋ ಇಂಡಿಯಾ ಯೂತ್ ಗೇಮ್ಸ್, ಅಸ್ಸಾಂನ ಗುವಾಹಟಿಯಲ್ಲಿ ಜನವರಿ 10 ರಿಂದ 22ರ ವರೆಗೆ ನಡೆಯುತ್ತಿದೆ.ಒಂಬತ್ತರ ಹರೆಯದಿಂದಲೇ ಬಿಲ್ಲುಗಾರಿಕೆಯಲ್ಲಿ ಪ್ರವೀಣೆಯಾಗಿರುವ ಶಿವಾಂಗಿನಿ ಈಗಾಗಲೇ ಅನೇಕ ಪದಕಗಳನ್ನು ಗೆದಿದ್ದಾರೆ. ಆಂಧ್ರ ಪ್ರದೇಶದಲ್ಲಿ ನಡೆದ 65ನೇ ರಾಷ್ಟ್ರೀಯ ಶಾಲಾ ಕ್ರೀಡಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲೂ ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 