ಖಿಳೇಗಾವಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
Khilegavi Government Kannada Higher Primary School Commencement Ceremony
ಸಂಬರಗಿ 02 : ಗಡಿಗ್ರಾಮ, ನಂದಿ ಬಸವಣ್ಣನ ಐಕ್ಯಸ್ಥಳ ಖಿಳೇಗಾವಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಗ್ರಾಮದಲ್ಲಿ ವಿಶೇಷ ಕನ್ನಡ ಜಾಗೃತಿ ಜಾತ ನಡೆಸುವ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಹಾತ್ಮ ಗಾಂಧೀಜಿ, ಡಾ. ಬಿ ಆರ್ ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ, ಅಕ್ಷರದ ಅವ್ವ ಸಾವಿತ್ರಿಬಾಯಿ ಪುಲೆ ಸೇರಿದಂತೆ ಅನೇಕ ಮಹಾಪುರುಷರ ವೇಷದಾರಿಗಳಾಗಿ ಆಗಮಿಸಿದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸಿ, ಮಾತೃಭಾಷೆ ಕನ್ನಡ ಮತ್ತು ಕನ್ನಡ ಶಾಲೆಗಳನ್ನು ಉಳಿಸಿ , ನಮ್ಮ ಸರ್ಕಾರಿ ಶಾಲೆ, ನಮ್ಮ ಹೆಮ್ಮೆ ಎಂಬ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಶಾಲೆಯಿಂದ ಪ್ರಾರಂಭವಾದ ಮೆರವಣಿಗೆ ಬಸವೇಶ್ವರ ದೇವಸ್ಥಾನದ ಸುತ್ತಲೂ ಇರುವ ಜನವಸತಿ ಪ್ರದೇಶಗಳಲ್ಲಿ ಸಂಚರಿಸಿ ಜನಜಾಗ್ರತಿ ಮೂಡಿಸಿ ಶಾಲೆ ಆವರಣದಲ್ಲಿ ಸಮಾರೋಪಗೊಂಡಿತು.
ಕರವೇ ಕಾರ್ಯಕರ್ತರಿಂದ ಜಾಗೃತಿ : ಈ ವೇಳೆ ಕರವೇ ಅಥಣಿ ತಾಲೂಕ ಅಧ್ಯಕ್ಷ ಉದಯ ಮಕಾಣಿ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ವಿವಿಧ ಕುಟುಂಬದ ಸದಸ್ಯರಿಗೆ, ವ್ಯಾಪಾರಸ್ಥರಿಗೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವ ಮೂಲಕ ನಮ್ಮೂರಿನ ಸರಕಾರಿ ಶಾಲೆಗಳನ್ನ ಉಳಿಸಿ ಬೆಳೆಸಿರಿ, ಎಂದು ವಿನಂತಿಸಿರು ಪಠ್ಯಪುಸ್ತಕ ಸಮವಸ್ತ್ರ ವಿತರಣೆ :ಶಾಲೆಯ ಆವರಣದಲ್ಲಿ ವಿದ್ಯಾದೇವತೆ ಸರಸ್ವತಿ ಹಾಗೂ ಗ್ರಾಮ ದೇವತೆ ಬಸವಣ್ಣನ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಶಾಲಾ ಮಕ್ಕಳಿಗೆ ಸಿಹಿ ಹಂಚಿ , ಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಪುಷ್ಪವೃಷ್ಟಿ ಮಾಡುವ ಮೂಲಕ ಮಕ್ಕಳನ್ನು ಶಾಲೆಗೆ ಸ್ವಾಗತಲಾಯಿತು.
ಭಾವಚಿತ್ರ ಪೂಜೆ ನೆರವೇರಿಸಿದ ಎಚ್ ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಾಸಾಬ ತೆಲಸಂಗ ಮಾತನಾಡಿ ಗಡಿ ಭಾಗದ ಅನೇಕ ಕನ್ನಡ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಜೊತೆಗೆ ವಿಷಯವಾರು ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಮತ್ತು ರಾಜ್ಯ ಸರ್ಕಾರ ಕೂಡಲೇ ಅತಿಥಿ ಶಿಕ್ಷಕರನ್ನು ನೇಮಿಸಬೇಕು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಬಸಪ್ಪ ಜಗಳಗಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಮ್ಮೂರಿನ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ವರ್ಷದಿಂದ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯಲು ಅವಕಾಶ ನೀಡಿರುವುದು ಸಂತಸದ ಸಂಗತಿ. ಇದರ ಜೊತೆಗೆ ನಮ್ಮ ಶಾಲೆಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ, ಇನ್ನಷ್ಟು ಕೊಠಡಿಗಳ ಸೌಲಭ್ಯ, ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಎ ಪಿ ಪವಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಮಹೇಶ್ ಉಮರೆ, ಸಂಪನ್ಮೂಲ ಅಧಿಕಾರಿ ಮಹಾಂತೇಶ ಕೂಳ್ಳೋಳ್ಳಿ, ಜಿ. ಎ. ಕೊಷ್ಟಿ ಸೇರಿದಂತೆ ಶಾಲೆಯ ಶಿಕ್ಷಕರಾದ ಟಿ. ಜೆ ಪೂಜಾರಿ, ವಿಜಯಲಕ್ಷ್ಮಿ ಶೇಟ್, ಎ. ಆಫ್. ಕಮಲಾಪುರೆ, ಕವಿತಾ ನಿಡೋಣಿ, ಪಿ ಪಿ ಪೂಜಾರಿ, ಕರವೇ ಅಧ್ಯಕ್ಷ ಉದಯ ಮಾಕಾಣಿ, ಜಗನ್ನಾಥ ಬಾಮನೆ, ಸಿದ್ದು ಹಂಡಗಿ, ಅಣ್ಣಾಸಾಬ ತೆಲಸಂಗ, ಸತೀಶ್ ಯಲ್ಲಟ್ಟಿ, ಶಿರಾಜ್ ಸನದಿ, ಮಹಾಂತೇಶ್ ಹಲವಾಯಿ, ಕುಮಾರ್ ಬಡಿಗೇರ, ಅನಿಲ್ ಒಡಿಯರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಫೋಟೋ : ಗಡಿ ಗ್ರಾಮ ಖಿಳೇಗಾವಿಯಲ್ಲಿ ಕನ್ನಡ ಜನಜಾಗ್ರತಿಯೊಂದಿಗೆ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರದೊಂದಿಗೆ ಸಿಹಿ ಹಂಚಿ ಪುಷ್ಪವೃಷ್ಠಿ ಮೂಲಕ ಸ್ವಾಗತಿಸಲಾಯಿತು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 