'ಮಾರ್ಕ್'ನ ಕಾಳಿ ಸಾಂಗ್‌ನಲ್ಲಿ ತ್ರಿಶೂಲ ಹಿಡಿದು ಅಬ್ಬರಿಸಿದ ಕಿಚ್ಚ
ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಡಿ. 25ರಂದು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ರೀಲೀಸ್ ಆಗುತ್ತಿದೆ. ಈಗಾಗಲೇ ದೊಡ್ಡ ಹೈಪ್ ಕ್ರಿಯೇಟ್ ಮಾಡಿರುವ 'ಮಾರ್ಕ್' ಚಿತ್ರತಂಡದಿಂದ ಇದೀಗ ಕಾಳಿ ಸಾಂಗ್ ರೀಲೀಸ್ ಮಾಡಲಾಗಿದೆ. ಅನಿರುದ್ಧ ಶಾಸ್ತ್ರಿ ಸಾಹಿತ್ಯ ಬರೆದು ಹಾಡಿಗೆ ಧ್ವನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಈ ಗೀತೆಗಿದೆ. ಕಿಚ್ಚ ಕಾಳಿ ಹಾಡಿನಲ್ಲಿ ರುದ್ರಾವತಾರ ತಾಳಿದ್ದಾರೆ. ಕೈಯಲ್ಲಿ ತ್ರಿಶೂಲ ಹಿಡಿದು ದುಷ್ಟರ ಸಂಹಾರ ಮಾಡಲು ಹೊಸ ಅವತಾರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ನಿರ್ದೇಶನ ಮಾಡಿರುವುದು ವಿಜಯ್ ಕಾರ್ತಿಕೇಯ. ಸಿನಿಮಾನಲ್ಲಿ ಸುದೀಪ್ ಜೊತೆಗೆ ಶೈನ್ ಟಾಮ್ ಚಾಕೊ, ಯೋಗಿ ಬಾಬು ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿದ್ದಾರೆ.
ಈಗಾಗಲೇ ಮುಂಗಡ ಬುಕ್ಕಿಂಗ್‌ನಲ್ಲಿ ಸೌಂಡ್ ಮಾಡುತ್ತಿರುವ ಮಾರ್ಕ್ ಚಿತ್ರಕ್ಕೆ ಕಿಚ್ಚ ಕ್ರಿಯೇಷನ್ ಮತ್ತು ಸತ್ಯಜ್ಯೋತಿ ಫಿಲಮ್ಸ್ ಬಂಡವಾಳ ಹೂಡಿದೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಮೂಲಕ ಪ್ರಿಯಾ ಸುದೀಪ್ 'ಮಾರ್ಕ್' ಸಿನಿಮಾವನ್ನು ವಿತರಣೆ ಮಾಡುವುದಕ್ಕೆ ಮುಂದಾಗಿದ್ದಾರೆ. ಇವರೊಂದಿಗೆ ಕೆಆರ್‌ಜಿ ಸ್ಟುಡಿಯೋ ಕೈ ಜೋಡಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 