ಕಿಚ್ಚ ಸುದೀಪ್ ಗೆ ಡಾ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ

ಬೆಂಗಳೂರು, ಸೆಪ್ಟೆಂಬರ್ 05: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್   ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಸುದೀಪ್ ಅವರಿಗೆ ಈ ಪ್ರಶಸ್ತಿ ನೀಡುವುದರ  ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 

ವೀರಕಪುತ್ರ ಶ್ರೀನಿವಾಸ, ಪರಿಷತ್ ಗೌರವ ಕೋಶಾಧ್ಯಕ್ಷ  ಮಲ್ಲಿಕಾರ್ಜುನಪ್ಪ, ಗೌರವ ಕಾರ್ಯದರ್ಶಿಗಳಾದ ವ.ಚ. ಚನ್ನೇಗೌಡ, ಡಾ. ರಾಜಶೇಖರ ಹತಗುಂದಿ ಮೊದಲಾದವರು ಆಯ್ಕೆ ಸಮಿತಿಯಲ್ಲಿದ್ದರು.

ಪ್ರಶಸ್ತಿಯು 25 ಸಾವಿರ ರೂಪಾಯಿ ನಗದು, ಪ್ರಶಸ್ತಿ  ಫಲಕವನ್ನು ಒಳಗೊಂಡಿದೆ.