ತಲ್ಲೂರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಕಿರಣ ಶೀಂದೆ ಅವರಿಗೆ ಸನ್ಮಾನ
ಲೋಕದರ್ಶನ ವರದಿ
ಯರಗಟ್ಟಿ 25 : ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದು, ಮಹಿಳಾಸಬಲೀಕರಣ ಆಶಯ ಸಾಕಾರಗೊಳ್ಳುತ್ತದೆ ಎಂದು ಜಿಲ್ಲಾ ವ್ಯವಸ್ಥಾಪಕ ಕಿರಣ ಶೀಂದೆ ಹೇಳಿದರು. ಸಮೀಪದ ತಲ್ಲೂರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಂಗಳವಾರ ಮಹಿಳಾ ಸಂಜೀವಿನಿ ಒಕ್ಕೂಟ ಹಮ್ಮಿಕೊಂಡಿದ್ದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದರು,
ಮಹಿಳೆಯರಲ್ಲಿ ಕೌಶಲ ಅಭಿವೃದ್ಧಿಗೊಳಿಸಿ ಅವರನ್ನು ಆರ್ಥಿಕವಾಗಿ ಪ್ರಗತೀಶೀಲರನ್ನಾಗಿಸುವ ಸಲುವಾಗಿ ರಾಜ್ಯದೆಲ್ಲೆಡೆ ಸಂಜೀವಿನಿ ಒಕ್ಕೂಟಗಳನ್ನು ರಚಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳಿವೆ ಎಂದರು. ಪಿಡಿಒ ರಾಘವೇಂದ್ರಕುಮಾರ ಎಸ್,ಪಿ ಮಾತನಾಡಿ, ಮಹಿಳಾ ಸಂಜೀವಿನಿ ಒಕ್ಕೂಟದಿಂದ ಗ್ರಾಮೀಣ ಪ್ರದೇಶಗಳ ಜನರ ಜೀವನ ಮಟ್ಟ ಸುಧಾರಣೆ ಸಾಧ್ಯ ಎಂದರು.