ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉತ್ಸವ ಕಾರ್ಯಕ್ರಮ
ಧಾರವಾಡ 16: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಜಿಲ್ಲೆಗೆ ಇಂದು ಬೆಳಿಗ್ಗೆ ಆಗಮಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಡಿಸಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಕವಿವ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ, ತಹಶಿಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದು, ಪುಷ್ಪಾರ್ಚಣೆ ಮಾಡಿದರು ಮತ್ತು ಕಲಾ ತಂಡಗಳು ಭಾಗವಹಿಸಿದ್ದವು.