ಕಿತ್ತೂರ ರಾಣಿ ಚೆನ್ನಮ್ಮ ಜಯಂತೋತ್ಸವ
ಶಿಗ್ಗಾವಿ 23: ಕಿತ್ತೂರ ರಾಣಿ ಚೆನ್ನಮ್ಮ 244 ನೇ ಜಯಂತೋತ್ಸವದ ಅಂಗವಾಗಿ ಕಿತ್ತೂರ ರಾಣಿ ಚೆನ್ನಮ್ಮ ಭಾವಚಿತ್ರದ ಮೇರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಶೇಷ ತಮಟೆ, ವಾಧ್ಯ, ಮೇಳಗಳ ಮತ್ತು ವಿಶೇಷವಾಗಿ ಮಹಿಳೆಯರ ಕುಂಭಗಳ ಮೇರವಣಿಗೆ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು ಸೇರಿದಂತೆ ಸಮಾಜದ ಪ್ರಮುಖ ಮುಖಂಡರು ಹಾಗೂ ಎಲ್ಲ ಸಮಾಜದ ಬಾಂದವರು ಉಪಸ್ಥಿತರಿದ್ದರು.