ನೈಟ್ ರೈಡರ್ಸ್ ಫೈನಲ್‌ಗೆ ಲಗ್ಗೆ
Knight Riders storm into the final
ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಗದಗ ಮೀಡಿಯಾ ಕ್ರಿಕೆಟ್ ಲೀಗ್ ರೋಚಕ ಹಂತ ತಲುಪಿದೆ. ರೂರಲ್ ಕಿಂಗ್ಸ್ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದ ನೈಟ್ ರೈಡರ್ಸ್ ತಂಡ ಒಂದು ಪಂದ್ಯ ಬಾಕಿ ಇರುವಂತೆಯೇ ಫೈನಲ್‌ಗೆ ಅರ್ಹತೆ ಪಡೆದಿದೆ.
ಗುರುವಾರ ನಡೆದ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರೂರಲ್ ಕಿಂಗ್ಸ್ ತಂಡ 10 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 85 ರನ್ ಗಳಿಸಿತು. ಸೂರಜ್ ಮಯೇಕರ್ 28, ಪ್ರಕಾಶ ಗುದ್ದಿನ 14 ಹಾಗೂ ನಿಂಗನಗೌಡ ಹನಮಗೌಡ್ರ 13 ರನ್ ಗಳಿಸಿದರು. ನೈಟ್ ರೈಡರ್ಸ್ ಪರ ಮಂಜು ಪತ್ತಾರ 2 ವಿಕೆಟ್ ಪಡೆದರೆ, ಅರುಣಕುಮಾರ ಹಿರೇಮಠ ಹಾಗೂ ಸಂಗನಗೌಡ ಖಾನಪ್ಪಗೌಡ್ರ ತಲಾ ಒಂದು ವಿಕೆಟ್ ಪಡೆದರು.
86 ರನ್‌ಗಳ ಗುರಿ ಬೆನ್ನತ್ತಿದ ನೈಟ್ ರೈಡರ್ಸ್ ತಂಡ 9 ಓವರ್‌ಗಳಲ್ಲೇ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಆರಂಭದಲ್ಲೇ ಒಂದು ವಿಕೆಟ್ ಕಳೆದುಕೊಂಡ ಬಳಿಕ ನಾಯಕ ಸುರೇಶ ಕಡ್ಲಿಮಟ್ಟಿ ಹಾಗೂ ಅರುಣಕುಮಾರ ಹಿರೇಮಠ 73 ರನ್‌ಗಳ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಸುರೇಶ ಕಡ್ಲಿಮಟ್ಟಿ 19 ಎಸೆತಗಳಲ್ಲಿ 41 ಹಾಗೂ ಅರುಣಕುಮಾರ ಹಿರೇಮಠ 20 ಎಸೆತಗಳಲ್ಲಿ 33 ರನ್ ಗಳಿಸಿದರು. ಸುರೇಶ ಕಡ್ಲಿಮಟ್ಟಿ ಪಂದ್ಯಶ್ರೇಷ್ಠರಾದರು.
ಇದಕ್ಕೂ ಮುನ್ನ ನಡೆದ ಮೂರನೇ ಪಂದ್ಯದಲ್ಲಿ ಆರಿ್ಸಬಿ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದ ವಿನ್ನರ್ಸ್ ತಂಡ ಸೆಮಿಫೈನಲ್‌ಗೆ ಪ್ರವೇಶಿಸಿತು. ಸತತ ಎರಡು ಸೋಲು ಕಂಡ ಆರಿ್ಸಬಿ ತಂಡ ಟೂರ್ನಿಯಿಂದ ಹೊರಬಿದ್ದಿತು.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಆರಿ್ಸಬಿ 10 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 84 ರನ್ ಗಳಿಸಿತು. ವಿನಾಯಕ ಚೌಡಾಪೂ 24 ಹಾಗೂ ಫಿರೋಜ್ ಮೊಮಿನ್ 18 ರನ್ ಗಳಿಸಿದರು. ವಿನ್ನರ್ಸ್ ಪರ ಅಶೋಕ ಹೂಗಾರ 2 ವಿಕೆಟ್ ಪಡೆದರೆ, ಈಶ್ವರ ತಿಪ್ಪರಡ್ಡಿ, ಬನೇಶ ಕುಲಕರ್ಣಿ ಹಾಗೂ ಪರಮೇಶ ಲಮಾಣಿ ತಲಾ ಒಂದು ವಿಕೆಟ್ ಪಡೆದರು.
ಗುರಿ ಬೆನ್ನತ್ತಿದ ವಿನ್ನರ್ಸ್ ತಂಡದ ಆರಂಭಿಕರಾದ ಅನಿಲ ತೆಂಬದಮನಿ 33 ಹಾಗೂ ಅನಿಲ ಚಲವಾದಿ 31 ರನ್ ಗಳಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು. ಅನಿಲ ತೆಂಬದಮನಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 