ನಡು ರಸ್ತೆಯಲ್ಲೇ ಸವದಿ ಆಪ್ತ, ಕಾಂಗ್ರೆಸ್ ಮುಖಂಡನ ಕೊಚ್ಚಿ ಕೊಲೆ : ಮುಸುಕುದಾರಿಗಳಿಂದ ಕೃತ್ಯ
ಬೆಳಗಾವಿ : ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡನನ್ನು ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಖಿಳೇಗಾವ ಗ್ರಾಮದಲ್ಲಿ ನಡೆದಿದೆ.
ಬಸಣ್ಣ ನಿಂಬಾಳ (58) ಹತ್ಯೆಗೀಡಾಗಿದಾ ಮುಖಂಡರಾಗಿದ್ದಾರೆ. ಅಥಣಿ ತಾಲೂಕಿನ ಖೀಳೆಗಾಂವನಲ್ಲಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರ ಮೇಲೆ ಸುಮಾರು 6 ದುಷ್ಕರ್ಮಿಗಳು ಇದ್ದ ಗುಂಪು ಹಲ್ಲೆ ನಡೆಸಿದ್ದಾರೆ. ಇವರ ಮೇಲೆ ಮಾರಕಾಸ್ತ್ರಗಳಿಂದ ಹಠಾತ್ತನೆ ದಾಳಿ ನಡೆಸಿದ ಕಾರಣ ಅಣ್ಣಪ್ಪ ಬಸಣ್ಣ ನಿಂಬಾಳ ಮೃತರಾಗಿದ್ದಾರೆ.
ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಖಿಳೆಗಾಂವ ಗ್ರಾಮಕ್ಕೆ ಪೊಲೀಸರು ಗ್ರಾಮಕ್ಕೆ ದೌಡಾಯಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಅಣ್ಣಪ್ಪ ಬಸಣ್ಣ ನಿಂಬಾಳ ಅವರು ಖಿಳೇಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಶಾಸಕ ಲಕ್ಷ್ಮಣ ಸವದಿ ಅವರ ಆಪ್ತರಾಗಿದ್ದಾರೆ. ಸ್ಥಳೀಯವಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿಯೂ ಇವರು ಹೆಚ್ಚು ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆದರೆ, ರಾಜಕೀಯ ದ್ವೇಷದಿಂದಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಗ್ರಾಮದ ಮೂಲಗಳು ತಿಳಿಸಿವೆ. ಅಥಣಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಖಿಳೇಗಾಂವ-ಅಥಣಿ ರಸ್ತೆಯ ಬಳಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿದ ಪರಿಣಾಮ ಭಾರಿ ಪ್ರಮಾಣದ ರಕ್ತಸ್ರಾವ ಉಂಟಾಗಿದೆ. ಬಳಿಕ ಅಣ್ಣಪ್ಪ ಬಸಣ್ಣ ನಿಂಬಾಳ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.