ಕೊಪ್ಪಳ: ಬಹಾರ ಪೇಟೆ ಶಾಲೆಗೆ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಮನವಿ
Koppal: Appeal demanding appointment of teachers for Baharapet School
ಕೊಪ್ಪಳ 05: ನಗರದ ಬಹಾರ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರ ನೇಮಕ್ಕೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಮೂರನಾಳ ಅವರಿಗೆ ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ಬಹಾರ ಪೇಟೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಜಂಟಿಯಾಗಿ ಮನವಿ ಸಲ್ಲಿಸಿದರು. ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಎಪ್ಪತ್ತಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮಂಜೂರಾಗಿದ್ದ ಶಿಕ್ಷಕರ ಹುದ್ದೆ ಐದರಲ್ಲಿ ಕರ್ತವ್ಯದಲ್ಲಿದ್ದ ನಾಲ್ಕು ಜನ ಶಿಕ್ಷಕರಲ್ಲಿ ಒಬ್ಬರು ಮುಂಬಡ್ತಿ ಹೊಂದಿ ವರ್ಗವಾಗಿದ್ದು. ಮೂರು ಶಿಕ್ಷಕರು ಮಾತ್ರ ಸೇವೆಯಲ್ಲಿ ಉಳಿದಿದ್ದಾರೆ.
ಒಂದರಿಂದ ಏಳನೇ ತರಗತಿಯ ಮಕ್ಕಳಿಗೆ ಪ್ರತ್ಯೇಕ ಬೋಧನೆ ಆಲಿಸಲು ಅನುಕೂಲಕರವಾದ ವಾತಾವರಣವನ್ನು ಇಲ್ಲದೆ.ಎರಡ್ಮೂರು ವರ್ಗಗಳನ್ನು ಒಂದೇ ಕಡೆ ನಡೆಸುವ ಅನಿವಾರ್ಯತೆ ಇದೆ. ಒಬ್ಬರನ್ನು ಖಾಯಂ ಶಿಕ್ಷಕರನ್ನು ನೇಮಕ ಮಾಡಿ. ಇನ್ನೊಬ್ಬರು ಇಂಗ್ಲಿಷ್ ಅತಿಥಿ ಶಿಕ್ಷಕರನ್ನು ನೇಮಕ ಮಾಡಿದರೆ ಕನಿಷ್ಠ ಸಮರ್ಕವಾಗಿ ಬೋಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮನವಿ ಸ್ವೀಕರಿಸಿದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಮೂರನಾಳ ಮಾತನಾಡಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ ಎಂದು ಹೇಳಿದರು. ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಎಸ್.ಎ.ಗಫಾರ್ ಮಾತನಾಡಿ ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ಕನ್ನಡ.
ಇಂಗ್ಲಿಷ್ ಓದಲು ಬರೆಯಲು ಕಲಿಸುವದರೊಂದಿಗೆ ಎಲ್ಲಾ ವಿಷಯಗಳು ಬೋಧನೆ ಮಾಡುವುದು ಬುನಾದಿ ಶಿಕ್ಷಣ.ಜಿಲ್ಲೆಯಲ್ಲಿ ಒಂದೆರಡು ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆಯೊಂದರ ಪ್ರಕಾರ ಪ್ರೌಢ ಶಾಲಾ ಮಕ್ಕಳಿಗೆ ಅ ಆ ಇ ಈ ಸರಿಯಾಗಿ ಬರೆಯಲು ಬರುತ್ತಿಲ್ಲ ಎಂಬ ಮಾಹಿತಿ ಬಂದಿದೆ.ಹೀಗಾಗಿ ಪ್ರಾಥಮಿಕ ಶಾಲೆಯಲ್ಲಿ ಅಗತ್ಯ ಶಿಕ್ಷಕರ ನೇಮಕ ಮಾಡಿ ಎಂದು ಒತ್ತಾಯಿಸಿದರು. ಬಹಾರ ಪೇಟೆ ಶಾಲೆಗೆ ಭೇಟಿ ನೀಡುತ್ತೇನೆ.ಮುಂದಿನ ನೇಮಕಾತಿಯಲ್ಲಿ ಇಂಗ್ಲಿಷ್ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಆದ್ಯತೆ ನೀಡೋಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಮೂರನಾಳ ಆಶ್ವಾಸನೆ ನೀಡಿದರು. ಬಹಾರ ಪೇಟೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ನಾಸಿರುದ್ದೀನ್ ಎಸ್.ಮಾಳೆಕೊಪ್ಪ. ಕೆಪಿಸಿಸಿ ಶಿಕ್ಷಕರ ಘಟಕದ ಜಿಲ್ಲಾ ಕಾರ್ಯದರ್ಶಿ ಉಮೇಶ್ ಸುರ್ವೆ ಮುಂತಾದವರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 