ಕೊಪ್ಪಳ: ಭಗೀರತ ಜಯಂತಿ: ಜಿಲ್ಲಾಡಳಿತದಿಂದ ಭಕ್ತಿ ನಮನ

ಕೊಪ್ಪಳ 11: ಭಗೀರತರವರ ಜಯಂತಿ ಆಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗೀರತರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ  ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.   

ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಭಗೀರತ ರವರ ಜಯಂತಿಯನ್ನು ಶನಿವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು.  

ಜಿಲ್ಲಾಧಿಕಾರಿ ಕಚೇರಿಯ ಜಗದೀಶ, ಮಹವೀರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಾಬಣ್ಣ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ಹಾಗೂ ಸಮಾಜದ ಮುಖಂಡರಾದ ಯಲ್ಲಪ್ಪ ಗಟ್ಟಿ, ವೆಂಕಟೇಶ ಬ್ಯಾಡಗಿ, ಮಲ್ಲಿಕಾರ್ಜುನ ತೂಗಡೋಣಿ, ಹನುಮಂತ ನಿಲಗುಂದಿ, ಶರಣಪ್ಪ ನಿಲಗುಂದಿ, ನಾಗಪ್ಪ ಮತ್ತು ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗೀರತರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನವನ್ನು ಸಲ್ಲಿಸಿದರು.