ಕೊಪ್ಪಳ

ನಾಳೆಯಿಂದ ಕೊಪ್ಪಳ ದಸರಾ ದಾಂಡಿಯಾ ಉತ್ಸವ: ಸಂಸದ ಕೆ. ರಾಜಶೇಖರ ಹಿಟ್ನಾಳ

ನಾಳೆಯಿಂದ ಕೊಪ್ಪಳ ದಸರಾ ದಾಂಡಿಯಾ ಉತ್ಸವ: ಸಂಸದ ಕೆ. ರಾಜಶೇಖರ ಹಿಟ್ನಾಳ


ಕೊಪ್ಪಳ 15: ಕೊಪ್ಪಳ ಜಿಲ್ಲಾ ಅಥ್ಲೆಟಿಕ್ಸ್‌ ಅಸೋಸಿಯೇಷನ್ ವತಿಯಿಂದ ದಸರಾ ಮಹೋತ್ಸವದ ಪ್ರಯುಕ್ತ ನಗರದ ತಾಲೂಕು ಕ್ರೀಡಾಂಗಣದಲ್ಲಿ ಇದೇ ಅಕ್ಟೋಬರ್ 17 ಮತ್ತು 18ರ ಶನಿವಾರ ಹಾಗೂ ಭಾನುವಾರ ಎರಡು ದಿನಗಳ ಕಾಲ ವೈಭವೋಪೇತ ‘ಕೊಪ್ಪಳ ದಸರಾ ದಾಂಡಿಯಾ ಉತ್ಸವ-2026’ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಅವರು ತಿಳಿಸಿದರು.ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳು ತೀವ್ರ ಬರಗಾಲವನ್ನು ಎದುರಿಸುತ್ತಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಒಟ್ಟಾಗಿ ಜಗನ್ಮಾತೆ ದುರ್ಗಾದೇವಿಯನ್ನು ಆರಾಧಿಸಿ, ಉತ್ತಮ ಮಳೆ-ಬೆಳೆಯಾಗಿ ನಾಡು ಸಮೃದ್ಧಿಗೊಳ್ಳಲಿ ಹಾಗೂ ಜನಜೀವನ ಸುಭಿಕ್ಷವಾಗಲಿ ಎಂದು ಪ್ರಾರ್ಥಿಸುವುದು ಈ ಉತ್ಸವದ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.

ಸುದ್ದಿ ಓದಿ