ಕೊಪ್ಪಳ ಕೆ.ಎಸ್. ಆಸ್ಪತ್ರೆಯಲ್ಲಿ ಅತ್ಯಾಧುನಿಕ ರೋಬೋಟಿಕ್ ಕೀಲು ಬದಲಾವಣೆ ಶಸ್ತ್ರಚಿಕಿತ್ಸಾ ಕೇಂದ್ರ ಉದ್ಘಾಟನೆ
Koppal K.S. State-of-the-art robotic joint replacement surgery center inaugurated at the hospital
ಕೊಪ್ಪಳ, ಜು.11: ಗ್ರಾಮೀಣ ಭಾಗದ ಜನರಿಗೆ ಮಹಾನಗರ ಮಟ್ಟದ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಕೊಪ್ಪಳದ ಕೆ.ಎಸ್. ಆಸ್ಪತ್ರೆಯಲ್ಲಿ ಅತ್ಯಾಧುನಿಕ ರೋಬೋಟಿಕ್ ಕೀಲು ಬದಲಾವಣೆ ಶಸ್ತ್ರಚಿಕಿತ್ಸಾ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಲಾಯಿತು.
ಕೊಪ್ಪಳ ಗವಿಮಠದ ಪರಮಪೂಜ್ಯ ಅಭಿನವ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿ ಅವರು ಕೇಂದ್ರವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಇದುವರೆಗೆ ಇಂತಹ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರು, ಹೈದರಾಬಾದ್ ಸೇರಿದಂತೆ ಮಹಾನಗರಗಳಿಗೆ ತೆರಳಬೇಕಾಗಿದ್ದ ಉತ್ತರ ಕರ್ನಾಟಕ ಹಾಗೂ ಕೊಪ್ಪಳ ಭಾಗದ ಜನರಿಗೆ ಈಗ ಸ್ಥಳೀಯವಾಗಿಯೇ ಈ ಸೌಲಭ್ಯ ಲಭ್ಯವಾಗಲಿದೆ.
ಆಸ್ಪತ್ರೆಯ ಮುಖ್ಯಸ್ಥ ಹಾಗೂ ಹಿರಿಯ ಅಸ್ಥಿರೋಗ ತಜ್ಞರಾದ ಡಾ. ಬಸವರಾಜ ಎಸ್. ಕ್ಯಾವಟರ್ ಮತ್ತು ಅವರ ತಂಡ ಈ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನವನ್ನು ಪರಿಚಯಿಸಿದ್ದು, ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಗಳನ್ನು ನಡೆಸಲಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 